ಗುರುವಾರ , ಮಾರ್ಚ್ 23, 2023
21 °C

‘ಮಕ್ಕಳ ಆಸಕ್ತಿಯ ಕ್ಷೇತ್ರ ಉತ್ತೇಜಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಅಂಕಪಟ್ಟಿಯ ಆಧಾರದ ಮೇಲೆ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಧರಿಸಬಾರದು. ಮಕ್ಕಳಿಗೆ ಆಸಕ್ತಿಕರ ಕ್ಷೇತ್ರದಲ್ಲಿ ಸಾಧನೆ ಮಾಡಲು ಪೋಷಕರು ಉತ್ತೇಜಿಸಬೇಕು ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ಸಲಹೆ ನೀಡಿದರು.

ನಗರದ ಸಿದ್ಧಗಂಗಾ ಶಾಲೆಯ ಆವರಣದಲ್ಲಿ ಸೋಮವಾರ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಏರ್ಪಡಿಸಿದ್ದ ಕನ್ನಡ ಕೌಸ್ತುಭ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯು ಜೀವನದ ಮಹತ್ವದ ಘಟ್ಟವಾಗಿದ್ದು, ಇದರಲ್ಲಿ ಹೆಚ್ಚು ಅಂಕ ಪಡೆಯುವುದಷ್ಟೇ ಸಾಧನೆಯಲ್ಲ. ಮುಂದಿನ ಸಾಧನೆಯ ಹಾದಿಗೆ ಇದು ಮೈಲಿಗಲ್ಲಾಗಬೇಕು. ಕಡಿಮೆ ಅಂಕ ಪಡೆದ ಮಾತ್ರಕ್ಕೆ ವಿದ್ಯಾರ್ಥಿಗಳ ಸಾಮರ್ಥ್ಯ ಕೀಳಂದಾಜಿಸಬಾರದು. ಓದಿನಲ್ಲಿ ಹಿನ್ನಡೆ ಅನುಭವಿಸಿದರೂ, ಜೀವನದಲ್ಲಿ ಸಾಧನೆ ಮಾಡಿದವರಿದ್ದಾರೆ‌ ಎಂದರು.

2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ಪ್ರಥಮ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಕನ್ನಡ ಕೌಸ್ತುಭ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ್, ಯಕ್ಷಗಾನ ಸಾಹಿತಿ ಜಯಲಕ್ಷ್ಮಿ ಕಾರಂತ್, ಸಿದ್ದಗಂಗಾ ವಿದ್ಯಾಸಂಸ್ಥೆ ಮುಖ್ಯಸ್ಥೆ ಜಸ್ಟಿನ್ ಡಿಸೋಜಾ, ಕಲಾಕುಂಚ ಅಧ್ಯಕ್ಷ ಕೆ.ಎಚ್. ಮಂಜುನಾಥ್, ಮಲ್ಯಾಡಿ ಪ್ರಭಾಕರ್ ಶೆಟ್ಟಿ, ಜಿ.ಬಿ. ಲೋಕೇಶ್, ಜ್ಯೋತಿ ಶೆಣೈ, ಹೇಮಾ ಪೂಜಾರಿ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.