ಭಾನುವಾರ, ಜನವರಿ 17, 2021
28 °C

ಆತ್ಮಹತ್ಯೆಗೆ ಯತ್ನಿಸಿದ ತಾಯಿ, ಮಗನ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರಿಹರ: ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಹಾಗೂ ಮಗುವನ್ನು 112 ಇಆರ್‌ಎಸ್‌ಎಸ್‌ (ಎಮರ್ಜೆನ್ಸಿ ರೆಸ್ಪಾನ್ಸ್‌ ಸಪೋರ್ಟ್‌ ಸಿಸ್ಟಂ) ಸಿಬ್ಬಂದಿ ರಕ್ಷಿಸಿದ್ದಾರೆ.

ಹೊಳಲ್ಕೆರೆ ತಾಲ್ಲೂಕಿನ ಗುಂಡಿಮಡು ಗ್ರಾಮದ ನಿವಾಸಿ ಅಶ್ವಿನಿ (28) ಆತ್ಮಹತ್ಯೆಗೆ ಯತ್ನಿಸಿದವರು. ಆರು ವರ್ಷದ ಮಗನೊಂದಿಗೆ ತಾಲ್ಲೂಕಿನ ಹಲಸಬಾಳು ಸೋಮವಾರ ಸಂಜೆ ಸೇತುವೆ ಬಳಿ ಬಂದಿದ್ದಾಗ ಅನುಮಾನಗೊಂಡ ಸ್ಥಳೀಯರಾದ ಹಲಸಬಾಳು ಬಾರಿಕೇರ ರೇವಣಪ್ಪ, ಪುಟಗನಾಳ್‌ನ ಶಂಕರಪ್ಪ ಎಂಬುವರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ತಕ್ಷಣ ಕಾರ್ಯ ಪ್ರವೃತ್ತರಾದ ಹೆಡ್ ಕಾನ್‌ಸ್ಟೆಬಲ್ ರಮೇಶ್, ವಾಹನ ಚಾಲಕ ಬಸವರಾಜ್ ಸ್ಥಳಕ್ಕೆ ತೆರಳಿ ತಾಯಿ-ಮಗನನ್ನು ರಕ್ಷಣೆ ಮಾಡಿ ಠಾಣೆಗೆ ಕರೆತಂದಿದ್ದಾರೆ. ನಂತರ ಸಂಬಂಧಿಗಳನ್ನು ಕರೆಸಿ ಸಮಾಧಾನಪಡಿಸಿ ಕಳುಹಿಸಿಕೊಡ ಲಾಗಿದೆ. ಕುಟುಂಬಸ್ಥರು ಭಾನುವಾರ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಬಂದಿದ್ದಾಗ ಅಶ್ವಿನಿ ಮತ್ತು ಮಗ ನಾಪತ್ತೆಯಾಗಿದ್ದರು.

ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು