ಮಂಗಳವಾರ, ಅಕ್ಟೋಬರ್ 27, 2020
28 °C

ಇಬ್ಬರು ಬಾಲಕಾರ್ಮಿಕರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನಗರದ ವಿವಿಧೆಡೆ ಶುಕ್ರವಾರ ದಾಳಿ ನಡೆಸಿದ ಪೊಲೀಸರು ಹಾಗೂ ಅಧಿಕಾರಿಗಳು ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ.

ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪೊಲೀಸ್ ಇಲಾಖೆ ಮತ್ತು ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆ ಅಧಿಕಾರಿಗಳು ಎರಡು ತಂಡಗಳನ್ನು ರಚಿಸಿಕೊಂಡು ನಗರದ ತಹಶೀಲ್ದಾರ್ ಕಚೇರಿ ಆವರಣ, ಎಪಿಎಂಸಿ, ಈರುಳ್ಳಿ ಮಾರ್ಕೆಟ್, ಪಿಸಾಳೆ ಕಾಂಪೌಡ್, ಅಗ್ನಿಶಾಮಕ ದಳದ ಕಚೇರಿ ಹಿಂಭಾಗ, ಆರ್.ಎಂ.ಸಿ ರಸ್ತೆ, ಪಿ.ಬಿ.ರಸ್ತೆ ಹಾಗೂ ವಿನೋಬನಗರದಲ್ಲಿ ದಾಳಿ ನಡೆಸಿದ್ದು, ಇಬ್ಬರು ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಪುನರ್ವಸತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಲಾಗಿದೆ.

ಕಾರ್ಮಿಕ ಅಧಿಕಾರಿ ಇಬ್ರಾಹಿಂಸಾಬ್, 1,2,3ನೇ ವೃತ್ತದ ಕಾರ್ಮಿಕ ನಿರೀಕ್ಷಕ ರಾಜಶೇಖರ್ ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಾಗೇಶ್, ರಾಜಪ್ಪ, ಎನ್.ಸಿ.ಎಲ್.ಪಿ ಯೋಜನಾ ನಿರ್ದೇಶಕ ಇ.ಎನ್‌. ಪ್ರಸನ್ನ ದಾಳಿಯಲ್ಲಿ ಪಾಲ್ಗೊಂಡಿದ್ದರು. 

ಯಾವುದೇ ಮಾಲೀಕರು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ಹಾಗೂ 14ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ಯೋಗಗಳಲ್ಲಿ ನೇಮಕ ಮಾಡಿಕೊಂಡಿರುವುದು ಕಂಡು ಬಂದಲ್ಲಿ, ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098, ದೂ.ಸಂ: 08192-237332, 230094 ಹಾಗೂ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆ ದೂ.ಸಂ: 08192-256626 ಅನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.