ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ ದರ ಹೆಚ್ಚಳ ವಿರೋಧಿಸಿ ಎತ್ತಿನಗಾಡಿಯಲ್ಲಿ ಸಂಚಾರ

Last Updated 29 ಜೂನ್ 2020, 13:26 IST
ಅಕ್ಷರ ಗಾತ್ರ

ದಾವಣಗೆರೆ: ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಸಿರುವುದುನ್ನು ಖಂಡಿಸಿ ಕಾಂಗ್ರೆಸ್‌ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಎತ್ತಿನ ಗಾಡಿಯಲ್ಲಿ ಇಲ್ಲಿನ ಜಯದೇವ ಸರ್ಕಲ್‌ನಲ್ಲಿ ಸಂಚರಿಸಿ ಪ್ರತಿಭಟನೆ ನಡೆಸಲಾಯಿತು.

ಐದು ಎತ್ತಿನ ಬಂಡಿಯಲ್ಲಿ ಕಾಂಗ್ರೆಸ್‌ ನಾಯಕರು ಏರಿ ಕುಳಿತು ಗಾಡಿ ಹೊಡೆದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನ ಸಭೆ ನಡೆಸಿ ಸರ್ಕಾರಗಳ ವೈಫಲ್ಯವನ್ನು ಖಂಡಿಸಿದರು. ತೈಲ ಬೆಲೆ ಏರಿಕೆ ತಡೆಯಬೇಕು, ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಕಾಂಗ್ರೆಸ್‌ ಜಿಲ್ಲಾ ಸಮಿತಿ ಅಧ್ಯಕ್ಷ ಎಚ್‌.ಬಿ. ಮಂಜಪ್ಪ, ಮುಖಂಡರಾದ ದಿನೇಶ್‌ ಕೆ. ಶೆಟ್ಟಿ, ಎ.ನಾಗರಾಜ್‌, ಕೆ.ಎಸ್‌. ಬಸವಂತಪ್ಪ, ಎಲ್‌.ಎಚ್‌. ಸಾಗರ, ದೇವರಮನೆ ಶಿವಕುಮಾರ್, ಅನಿತಾಬಾಯಿ ಮಾಲತೇಶ್‌, ದ್ರಾಕ್ಷಾಯಣಮ್ಮ, ರಾಜೇಶ್ವರಿ ಉಮೇಶ್‌, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್‍ಎಸ್‍ಯುಐ, ಪ್ರಚಾರ ಸಮಿತಿ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ, ಕಿಸಾನ್, ಸೇವಾದಳ, ಒಬಿಸಿ, ಅಲ್ಪಸಂಖ್ಯಾತರ ವಿಭಾಗ, ವೈದ್ಯಕೀಯ, ವಕೀಲರ ಘಟಕ, ಅಸಂಘಟಿತ ಕಾರ್ಮಿಕರ ಘಟಕ, ಕಾರ್ಮಿಕ, ವಿಕಲಚೇತರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT