ಗುರುವಾರ , ಫೆಬ್ರವರಿ 25, 2021
17 °C
ವಿವಿಧ ಬೇಡಿಕೆಗಳ ಈಡೇರಿಕೆಗಳಿಗೆ ಆಗ್ರಹ

ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಿ.ಎಚ್.ರಸ್ತೆಯ ಪಂಚಮಹಾ ದೇವಸ್ಥಾನದಿಂದ ಮೆರವಣಿಗೆ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬೇಡಿಕೆಗಳು ಈಡೇರದಿದ್ದರೆ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯನ್ನು ಬಹಿಷ್ಕರಿಸಿ ‘ವಿಧಾನಸೌಧ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ತಿಪ್ಪೇಶಪ್ಪ ಎಚ್ಚರಿಸಿದರು.

ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ (ವೃಂದ ಮತ್ತು ನೇಮಕಾತಿ ನಿಯಮಗಳನ್ನು ಬದಲಾಯಿಸಿ) ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ ‍ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕ ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸಿದ್ದೇಶಿ, ಸಹ ಕಾರ್ಯದರ್ಶಿ ಎಚ್‌. ಚಂದ್ರಪ್ಪ, ಸಂಘಟನಾ ಕಾರ್ಯದರ್ಶಿ ಖೈರುನ್ನೀಸಾ, ಗಂಗಾಧರ ನಾಯ್ಕ, ದಾವಣಗೆರೆ ದಕ್ಷಿಣ ಸಂಘದ ಅಧ್ಯಕ್ಷ ಜಿ.ಆರ್‌.ಶಿವಲಿಂಗಪ್ಪ, ದಾವಣಗೆರೆ ಉತ್ತರ ಸಂಘದ ಅಧ್ಯಕ್ಷ ಎಸ್. ಓಂಕಾರಪ್ಪ, ಚನ್ನಗಿರಿ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಎಚ್. ಮಹೇಶ್ವರಪ್ಪ, ಹರಿಹರ ತಾಲ್ಲೂಕು ಸಂಘದ ಅಧ್ಯಕ್ಷ ನಜೀರ್, ಜಗಳೂರು ತಾಲ್ಲೂಕು ಸಂಘದ ಶ್ಯಾಮಣ್ಣ, ಹೊನ್ನಾಳಿ ತಾಲ್ಲೂಕು ಸಂಘದ ಕರಿಬಸವಯ್ಯ, ಸಂಘದ ಪದಾಧಿಕಾರಿಗಳಾದ, ದೇವೆಂದ್ರಪ್ಪ, ಪ್ರಕಾಶ್‌ ಮಡಿವಾಳ, ಬಸವರಾಜ್, ವೀರೇಶ್, ಮಂಜಪ್ಪ ಬಿದರಿ, ಕರಿಬಸಯ್ಯ, ವೇದಮೂರ್ತಿ, ಹಜಾಜ್ ಅಹಮದ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.