ಭಾನುವಾರ, ಜೂನ್ 20, 2021
21 °C

ರಾಜ್ಯ ಸರ್ಕಾರದ ವಿರುದ್ಧ ಮನೆಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕೋವಿಡ್ ಸಂದರ್ಭದಲ್ಲಿ ಜನರ ಜೀವ ಉಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ನಿಮಾ೯ಣ ಮತ್ತು ಕಾರ್ಮಿಕರ ಒಕ್ಕೂಟವು ಶನಿವಾರ ಪ್ರತಿಭಟನೆ ನಡೆಸಿತು.

ಲಾಕ್‌ಡೌನ್ ಕಾರಣ ಬಹುತೇಕರು ತಮ್ಮ ಮನೆಗಳಲ್ಲಿ ಹಾಗೂ ಮನೆ ಸಮೀಪದ ವೃತ್ತಗಳಲ್ಲಿ ಸೇರಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಜನಾಗ್ರಹ ಆಂದೋಲನದ ಕರೆಯಂತೆ ನಡೆದ ಈ ಪ್ರತಿಭಟನೆಯಲ್ಲಿ ಪೌರಕಾರ್ಮಿಕರು, ಒಳಚರಂಡಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಮತ್ತು ಅಸಂಘಟಿತ ಕಾರ್ಮಿಕರು ಪಾಲ್ಗೊಂಡಿದ್ದರು.

ಸರ್ಕಾರದ ಧೋರಣೆಯಿಂದಾಗಿ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಈ ಬಿಕ್ಕಟ್ಟಿನ ಬಗ್ಗೆ ಮುಖ್ಯಮಂತ್ರಿ ಸಹಿತ ಹಲವರಿಗೆ ಮನವಿ ನೀಡಿದ್ದರೂ ಸರ್ಕಾರ ಪರಿಗಣಿಸಿಲ್ಲ. ಆಮ್ಲಜನಕ ಪೂರೈಕೆ ಕೊರತೆ ಇರುವುದರಿಂದ ಸೋಂಕಿತರ ಚಿಕಿತ್ಸೆಗಾಗಿ ಆಮ್ಲಜನಕ ಬೆಡ್‌ ಜಾಸ್ತಿ ಮಾಡಲು ಸಾಧ್ಯವಿಲ್ಲ. ಇರುವುದರಲ್ಲೇ ಚಿಕಿತ್ಸೆ ನೀಡಬೇಕಿದೆ ಎಂದು ಸರ್ಕಾರದ ಅಧಿಕಾರಿಗಳೇ ಹೇಳುತ್ತಿದ್ದಾರೆ. ಇದೆಲ್ಲ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಒಕ್ಕೂಟದ ಜಿಲ್ಲಾಧ್ಯಕ್ಷ ಮಂಜುನಾಥ ಕೆ.ಎಂ., ಉಪಾಧ್ಯಕ್ಷ ವೆಂಕಟೇಶ ಜೆ.ವಿ., ಸದಸ್ಯರಾದ ಕೃಷ್ಣಪ್ಪ ಒ., ದುಗ್ಗಪ್ಪ, ಶಂಕರ, ರೇಖಾ, ರಾಮಲಮ್ಮ, ಮಾರ್ತಾಂಡ, ಕುಮಾರ, ಸಂತೋಷ, ಮಹಾಂತೇಶ ಅವರೂ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು