ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

Last Updated 23 ಜುಲೈ 2020, 12:52 IST
ಅಕ್ಷರ ಗಾತ್ರ

ದಾವಣಗೆರೆ: ಕೃಷಿ, ಕೂಲಿ ಕಾರ್ಮಿಕರು, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು, ವಿವಿಧ ಕಾಯ್ದೆಗಳ ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘದ ಸದಸ್ಯರು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಜನರು ಕೋವಿಡ್‌ ಸಂಕಷ್ಟದಲ್ಲಿರುವಾಗ ಜನರ ಕಷ್ಟ ಪರಿಹರಿಸದೆ ವಿವಿಧ ಕಾಯ್ದೆಗಳ ತಿದ್ದುಪಡಿಗೆ ಸರ್ಕಾರಗಳು ಮುಂದಾಗಿವೆ ಎಂದು ಆರೋಪಿಸಿದರು.

ಕೊರೊನಾ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕೃಷಿ, ಕೂಲಿ ಕಾರ್ಮಿಕರು, ರೈತರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು. ಎಲ್ಲ ಜನರಿಗೂ ಉಚಿತ ಹಾಗೂ ಸುರಕ್ಷಿತ ಚಿಕಿತ್ಸೆ ನೀಡಬೇಕು. ಅದಾಯ ತೆರಿಗೆ ವ್ಯಾಪ್ತಿಗೆ ಬಾರದ ಕುಟುಂಬಗಳಿಗೆ ತಿಂಗಳಿಗೆ ₹ 7,500 ಸಹಾಯಧನ ನೀಡಬೇಕು. ತಿಂಗಳಿಗೆ ಅಗತ್ಯ ಆಹಾರ ಸಾಮಗ್ರಿ ಒದಗಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದವರಿಗೆ ಉದ್ಯೋಗ ಖಾತ್ರಿಯಡಿ ಕೆಲಸ ನೀಡಬೇಕು. ಕೃಷಿ ಸಂಬಂಧಿಸಿದ ಎಲ್ಲ ಕಾಯ್ದೆಗಳ ತಿದ್ದುಪಡಿ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಸಂಚಾಲಕ ಆನಂದರಾಜು ಕೆ.ಎಚ್‌., ಮುಖಂಡರಾದ ಇ. ಶ್ರೀನಿವಾಸ, ಗುಡ್ಡಪ್ಪ, ತಿಮ್ಮಣ್ಣ ಹೊನ್ನೂರು, ಕರಿಬಸಪ್ಪ, ಜಯಣ್ಣ ಜಾಧವ್‌, ಸಯ್ಯದ್‌ ಜಬಿ, ನಾಗಪ್ಪ, ತಿಪ್ಪೇಶ್‌, ಕಲಂದರ್‌, ಜಯನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT