ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕ, ಉಪನ್ಯಾಸಕರಿಗೆ ಕೋವಿಡ್‌ ಪ್ಯಾಕೇಜ್‌ ನೀಡಿ: ಆಗ್ರಹ

Last Updated 6 ಸೆಪ್ಟೆಂಬರ್ 2020, 3:21 IST
ಅಕ್ಷರ ಗಾತ್ರ

ದಾವಣಗೆರೆ: ಅತಿಥಿ ಶಿಕ್ಷಕರು, ಉಪನ್ಯಾಸಕರು, ಖಾಸಗಿ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಕಳೆದ ಮಾರ್ಚ್‌ನಿಂದ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರಿಗೆ ಕೋವಿಡ್‌ ಪ್ಯಾಕೇಜ್‌ ಒದಗಿಸಬೇಕು. ಸೇವಾ ಭದ್ರತೆ ನೀಡಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ಆನ್‌ಲೈನ್‌ನಲ್ಲಿ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿತು.

ಕಾಯಂ ವೇತನ ಇಲ್ಲದ ಖಾಸಗಿ ಶಾಲೆ, ಕಾಲೇಜುಗಳ 3 ಲಕ್ಷಕ್ಕೂ ಹೆಚ್ಚು ಶಿಕ್ಷಕರು, ಉಪನ್ಯಾಸಕರು, 50 ಸಾವಿರಕ್ಕೂ ಅಧಿಕ ಅತಿಥಿ ಶಿಕ್ಷಕರು, ಉಪನ್ಯಾಸಕರು ಬೀದಿಗೆ ಬೀಳುವ ಅಪಾಯದಲ್ಲಿ ಇದ್ದಾರೆ. ಅವರ ನೆರವಿಗೆ ಧಾವಿಸದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನುಣುಚಿಕೊಂಡಿವೆ. ಅವರ ಹೋರಾಟಕ್ಕೆ ಎಐಡಿಎಸ್‌ಒ ಬೆಂಬಲ ನೀಡುತ್ತದೆ ಎಂದು ಜಿಲ್ಲಾ ಅಧ್ಯಕ್ಷೆ ಸೌಮ್ಯಾ ಜೆ., ಕಾರ್ಯದರ್ಶಿ ಪೂಜಾ ನಂದಿಹಳ್ಳಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT