ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಪಿಯುಸಿ ಪೂರಕ ಪರೀಕ್ಷೆ

ಒಬ್ಬ ವಿದ್ಯಾರ್ಥಿಗೆ ಕೋವಿಡ್* ಪ್ರತ್ಯೇಕ ಕೇಂದ್ರ
Last Updated 6 ಸೆಪ್ಟೆಂಬರ್ 2020, 16:27 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರದಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆರಂಭವಾಗಲಿದ್ದು, ಕೋವಿಡ್ ಮಾರ್ಗಸೂಚಿಯನ್ವಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಈಗಾಗಲೇ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಪರೀಕ್ಷಾ ದಿವಸ ಥರ್ಮಲ್ ಸ್ಕ್ರೀನಿಂಗ್ ಹಾಗೂ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್, ಮಾಸ್ಕ್‌ಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ನಾಗರಾಜಪ್ಪ ತಿಳಿಸಿದರು.

‘ಸೆ.19ವರೆಗೆ ಪರೀಕ್ಷೆಗಳು ನಡೆಯಲಿದ್ದು,ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ಕಾರಣಾಂತರಗಳಿಂದ ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾದ ಜಿಲ್ಲೆಯ 6587 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ’ ಎಂದು ನಾಗರಾಜ್ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳು
ದಾವಣಗೆರೆಯ ಡಿಆರ್‌ಎ ವಿಜ್ಞಾನ ಪದವಿ ಪೂರ್ವ ಕಾಲೇಜು, ಮೋತಿ ವೀರಪ್ಪ ಸರ್ಕಾರಿ ಪದವಿಪೂರ್ವ ಕಾಲೇಜು, ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಕ್ಸ್ ಮುನ್ಸಿಪಲ್ ಕಾಲೇಜು, ಹರಿಹರದ ಧರಾಮ ಸರ್ಕಾರಿ ಪದವಿಪೂರ್ವ ಕಾಲೇಜು, ಜಗಳೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಹೊನ್ನಾಳಿಯ ಸರ್ಕಾರಿ ಪದವಿಪೂರ್ವ ಕಾಲೇಜು.

ಪರೀಕ್ಷೆ ಬರೆಯುವ ಒಬ್ಬ ಕೋವಿಡ್ ವಿದ್ಯಾರ್ಥಿ
‘ಪರೀಕ್ಷೆಗೆ ನೋಂದಣಿ ಮಾಡಿಸಿರುವ ಒಬ್ಬ ವಿದ್ಯಾರ್ಥಿಗೆ ಕೋವಿಡ್–19 ಪಾಸಿಟಿವ್ ಇದ್ದು, ಜಿಲ್ಲಾ ಚಿಗಟೇರಿ ಆಸ್ಪತ್ರೆಯನರ್ಸಿಂಗ್ ಸ್ಕೂಲ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.ಡಿಎಚ್‌ಒಗೆ ಈ ಬಗ್ಗೆ ಮಾಹಿತಿ ನೀಡಿದ್ದು, ನೋಡೆಲ್ ಅಧಿಕಾರಿಯಾಗಿ ಪ್ರಾಚಾರ್ಯರು ಹಾಗೂ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ’ ಎಂದು ನಾಗರಾಜಪ್ಪ ತಿಳಿಸಿದರು.

‘ಪ್ರಶ್ನೆ ಪತ್ರಿಕೆ ನೀಡಿ ವಿದ್ಯಾರ್ಥಿ ಪರೀಕ್ಷೆ ಬರೆದ ನಂತರ ಉತ್ತರ ಪತ್ರಿಕೆಯನ್ನು ಸ್ಯಾಟಿಟೈಸ್ ಮಾಡಿಸಿ ಪ್ಯಾಕಿಂಗ್ ಮಾಡಿ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಕೋವಿಡ್ ದೃಢಪಟ್ಟ ವಿದ್ಯಾರ್ಥಿಗಳ ಮಾಹಿತಿಯನ್ನು ಒಂದು ದಿನ ಮುಂಚಿತವಾಗಿ ನೀಡಬೇಕು. ಆ್ಯಂಬುಲೆನ್ಸ್‌ನಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT