ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಪಂಪ್‌ಸೆಟ್‌ ತೆರವು ಕಾರ್ಯಾಚರಣೆ

Last Updated 18 ಜುಲೈ 2021, 4:56 IST
ಅಕ್ಷರ ಗಾತ್ರ

ಸಂತೇಬೆನ್ನೂರು: ‘ಹೈಕೋರ್ಟ್ ಆದೇಶದ ಅನುಸಾರ ಭದ್ರಾ ನಾಲೆಗೆ ಅಳವಡಿಸಿರುವ ಅಕ್ರಮ ಪಂಪ್‌ಸೆಟ್‌ಗಳನ್ನು ಖುದ್ದಾಗಿ ಪರಿಶೀಲಿಸಿ ತೆರವು ಕಾರ್ಯಾಚರಣೆ ಕೈಗೊಂಡಿದ್ದೇನೆ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬಿಳಗಿ ತಿಳಿಸಿದರು.

ಇಲ್ಲಿಗೆ ಸಮೀಪದ ಗೆದ್ದಲಹಟ್ಟಿ ಬಳಿ ಶನಿವಾರ ಭದ್ರಾ ನಾಲೆ ವೀಕ್ಷಿಸಿ ಮಾತನಾಡಿದರು.

ಅಕ್ರಮ ಪಂಪ್‌ಸೆಟ್‌ಗಳ ಬಳಕೆ ಮೂಲಕ ಹೈಕೋರ್ಟ್ ಆದೇಶ ಉಲ್ಲಂಘಿಸಲಾಗಿದೆ ಎಂದು ಭದ್ರಾನಾಲೆ ಕೊನೆಭಾಗದ ರೈತರು ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದಾರೆ. ಹಾಗಾಗಿ ಅಕ್ರಮ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಹೈಕೋರ್ಟ್‌ಗೆ ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.

ಈಗಾಗಲೇ ಅಕ್ರಮ ಪಂಪ್‌ಸೆಟ್‌
ಗಳನ್ನು ತೆರವುಗೊಳಿಸಲಾಗಿತ್ತು. ಆದರೂ ಮತ್ತೆ ಅಕ್ರಮ ಪಂಪ್‌ಸೆಟ್‌ಗಳನ್ನು ಅಳವಡಿಸುವ ಪ್ರಕ್ರಿಯೆ ನಡೆದಿದೆ. ಅಕ್ರಮ ಪಂಪ್‌ಸೆಟ್‌ಗಳಿಗೆ ಅವಕಾಶ ನೀಡಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ದಾವಣಗೆರೆಯಿಂದ ಸಿದ್ಧನಮಠ, ಸಂತೇಬೆನ್ನೂರು, ಸೂಳೆಕೆರೆ, ಸಾಗರ
ಪೇಟೆ, ಕುಂಬಳೂರು, ಯಲವಟ್ಟಿ ಕ್ಯಾಂಪ್, ಕಮಲಾಪುರದವರೆಗೆ ಭದ್ರಾ
ನಾಲೆ ಕಾರ್ಯಾಚರಣೆ ನಡೆಯಿತು.ಚನ್ನಗಿರಿ ತಹಶೀಲ್ದಾರ್ ಪಟ್ಟರಾಜ ಗೌಡ, ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಪ್ಪ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ಚಂದ್ರಶೇಖರ್, ಷಡಕ್ಷರಿ, ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾಗರಾಜ್, ಉಪ ತಹಶೀಲ್ದಾರ್ ಮಂಜುನಾಥ್, ಸಿಪಿಐ ಮಹೇಶ್, ಎಸ್‌ಐ ಶಿವರುದ್ರಪ್ಪ ಮೇಟಿ, ಆರ್‌ಐ ವಿಶ್ವನಾಥ್, ವಿಜಯ್, ತಿಪ್ಪೇಸ್ವಾಮಿ, ಕೆ.ಜೆ. ಮಧು, ಶಶಿಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT