ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಪುನೀತ್‌ ನುಡಿನಮನ, ಕಲಾವಿದರ ಸನ್ಮಾನ 26ಕ್ಕೆ

Last Updated 25 ಜೂನ್ 2022, 5:07 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಗಾನಸುಧೆ ಕಲಾ ಬಳಗದ 3ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಪುನೀತ್‌ ರಾಜ್‌ಕುಮಾರ್ ಗೀತ ನುಡಿನಮನ ಮತ್ತು ಸುಗಮ ಸಂಗೀತ ಕಾರ್ಯಕ್ರಮ ಹಾಗೂ ಅಗಲಿದ ಕಲಾವಿದರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜೂನ್‌ 26ರಂದು ಮಧ್ಯಾಹ್ನ 3ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಗೌರವಾಧ್ಯಕ್ಷ ಚಿಂದೋಡಿ ಶಂಭುಲಿಂಗಪ್ಪ ಹೇಳಿದರು.

‘ನಗರದ ಕುವೆಂಪು ಕನ್ನಡ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ನಟ ಪುನೀತ್‌ ರಾಜ್‌ಕುಮಾರ್‌ ಹಾಗೂ ಈಚೆಗೆ ಅಗಲಿದ ದಾವಣಗೆರೆಯ ಕಲಾವಿದರಾದ ಮಂಜುಳಾ, ಗೀತಾ ಹಾಗೂ ಪರಮೇಶ್ವರಪ್ಪ ಅವರಿಗೆ ನುಡಿನಮನ ಸಲ್ಲಿಸಲಾಗುವುದು. ಅಲ್ಲದೇ ದಾವಣಗೆರೆ ಸೇರಿ 17 ಜಿಲ್ಲೆಗಳ ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಗುವುದು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಮೇಯರ್‌ ಬಿ.ಜಿ. ಅಜಯ್‌ಕುಮಾರ್‌ ಉದ್ಘಾಟಿಸುವರು. ಮಾಜಿ ಶಾಸಕ ಎಚ್‌.ಎಸ್. ಶಿವಶಂಕರ್‌, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಮಹಾನಗರ ಪಾಲಿಕೆ ಸದಸ್ಯ ಎಲ್‌.ಆರ್‌. ಶಿವಪ್ರಕಾಶ್‌, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ವಾಮದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಉದ್ಯಮಿ ಪಾಪಣ್ಣ ಸೇರಿ ಹಲವು ಗಣ್ಯರು ಭಾಗವಹಿಸುವರು.ಜ್ಞಾನಸಾಗರ ಪಿಯು ಕಾಲೇಜಿನ ಸಂಸ್ಥಾಪಕ ಕಾರ್ಯದರ್ಶಿ ಬಸವರಾಜ್‌ ಸಾಗರ್‌ ಅಧ್ಯಕ್ಷತೆ ವಹಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಬಳಗದ ಅಧ್ಯಕ್ಷ ಮಂಜುನಾಥ್‌ ಎನ್‌., ಟಿ. ಪರಮೇಶ್‌, ಮಂಜುನಾಥ ಆವರಗೆರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT