ಮಂಗಳವಾರ, ಡಿಸೆಂಬರ್ 1, 2020
26 °C

48 ಪಟಾಕಿ ಅಂಗಡಿಗಳಿಗೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಹಸಿರು ಪಟಾಕಿ ನಿಯಮ ಉಲ್ಲಂಘಿಸಿ ಪಟಾಕಿ ಮಾರಾಟ ಮಾಡುತ್ತಿದ್ದ 48 ಮಳಿಗೆಗಳಿಗೆ ಮಹಾನಗರ ಪಾಲಿಕೆಯ ಆರೋಗ್ಯ ಮತ್ತು ಪರಿಸರ ವಿಭಾಗದ ಅಧಿಕಾರಿಗಳು ಶನಿವಾರ ದಾಳಿ ನಡೆಸಿದರು. ₹ 50 ಸಾವಿರಕ್ಕೂ ಅಧಿಕ ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡರು.

ಪಟಾಕಿ ಮಳಿಗೆ ಹಾಕಲು ಅನುಮತಿ ನೀಡುವಾಗ ಯಾವ ಪಟಾಕಿಗಳನ್ನು ಮಾರಾಟ ಮಾಡಬೇಕು ಎಂದು ಷರತ್ತುಗಳನ್ನು ಹಾಕಲಾಗಿತ್ತು. ಅದರ ಪ್ರಕಾರ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್‌ ಸಂಶೋಧನಾ ಸಂಸ್ಥೆಗಳಿಂದ ದೃಢೀಕೃತ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ನಿಯಮ ಉಲ್ಲಂಘಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿದರು.

ವಶಪಡಿಸಿಕೊಳ್ಳಲಾದ ಪಟಾಕಿಯನ್ನು ಪಾಲಿಕೆಯ ಕಸ ಸಾಗಾಟದ ವಾಹನದಲ್ಲಿ ಒಯ್ದು ಮಹಜರು ಮಾಡಲಾಯಿತು.

ಪಾಲಿಕೆಯ ಪರಿಸರ ಎಂಜಿನಿಯರ್‌ಗಳಾದ ಸುನಿಲ್‌ ಜಿ.ಎಂ., ಬಸವಣ್ಣ, ಆರೋಗ್ಯ ನಿರೀಕ್ಷಕಿ ಮಧುಶ್ರೀ, ಸಹಾಯಕರಾದ ಲೋಕೇಶ್‌, ಹುಸೇನ್‌ ಮತ್ತು ತಂಡ ಕಾರ್ಯಾಚರಣೆ ನಡೆಸಿದರು. ಡಿವೈಎಸ್‌ಪಿ ನಾಗೇಶ್‌ ಐತಾಳ್‌, ಇನ್‌ಸ್ಪೆಕ್ಟರ್‌ ಗುರುಬಸವರಾಜ್‌, ಎಸ್‌ಐಗಳಾದ ಸಂಜೀವ್‌ಕುಮಾರ್‌, ರೂಪಾ ತೆಂಬದ, ವೀರೇಶ್‌ ಕುಮಾರ್‌, ಕಿರಣ್‌ಕುಮಾರ್‌ ಮತ್ತು ಸಿಬ್ಬಂದಿ ಭದ್ರತೆ ಒದಗಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು