ದ್ವಿಚಕ್ರ ವಾಹನ ತಳ್ಳಿಕೊಂಡು ಹೋಗಿ ಪ್ರತಿಭಟನೆ

7
ಪೆಟ್ರೋಲ್‌, ಡೀಸೆಲ್‌, ವಿದ್ಯುತ್‌ ಬೆಲೆ ಏರಿಕೆಗೆ ಸಿಐಟಿಯು ವಿರೋಧ

ದ್ವಿಚಕ್ರ ವಾಹನ ತಳ್ಳಿಕೊಂಡು ಹೋಗಿ ಪ್ರತಿಭಟನೆ

Published:
Updated:
Deccan Herald

ದಾವಣಗೆರೆ: ಪೆಟ್ರೋಲ್‌, ಡೀಸೆಲ್‌, ವಿದ್ಯುತ್‌ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ (ಸಿಐಟಿಯು) ಸೋಮವಾರ ದ್ವಿಚಕ್ರ ವಾಹನಗಳನ್ನು ತಳ್ಳಿಕೊಂಡು ಮೆರವಣಿಗೆ ನಡೆಸುವ ಮೂಲಕ ಪ್ರತಿಭಟಿಸಿತು.

ಇಂಧನ ಬೆಲೆ ಏರಿಕೆಯಿಂದ ಜೀವನಾವಶ್ಯಕ ವಸ್ತುಗಳ ಬೆಲೆಯೂ ಹೆಚ್ಚಳವಾಗುತ್ತಿದೆ. ಇದರಿಂದ ಜನಜೀವನಕ್ಕೆ ತೊಂದರೆಯಾಗಿದೆ. ಭವಿಷ್ಯನಿಧಿಯ ಮೇಲಿನ ಬಡ್ಡಿದರ ಇಳಿಕೆ ಮಾಡಿರುವುದು, ನಿರುದ್ಯೋಗ ಸಮಸ್ಯೆ ಏರಿಕೆಯಾಗಿವಂತೆ ಮಾಡಿರುವುದು, ಯುವಜನರನ್ನು ಸ್ಕಿಲ್‌ ಇಂಡಿಯಾ ಹೆಸರಲ್ಲಿ ಕಡಿಮೆ ವೇತನಕ್ಕೆ ದುಡಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಹೇಳಿದರು.

ಬೆಳೆ ಸಾಲದಿಂದ ರೈತರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆರೋಗ್ಯ, ಶಿಕ್ಷಣ, ರೈಲ್ವೆ, ರಸ್ತೆ, ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿರುವುದು ಸರಿಯಲ್ಲ. ಬ್ಯಾಂಕ್‌ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಠೇವಣಿ ಕಡ್ಡಾಯ ಮಾಡಿ ದಂಡ ವಸೂಲಿ ಮಾಡುತ್ತಿರುವುದು ಜನ ವಿರೋಧಿ ಕ್ರಮ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಚ್‌. ಆನಂದರಾಜು, ಜಿಲ್ಲಾ ಘಟಕದ ಕಾರ್ಯದರ್ಶಿ ಜೆ.ಎಂ. ನವೀನ್‌ ಕುಮಾರ್‌, ಜಿಲ್ಲಾ ಅಧ್ಯಕ್ಷ ಗಿರೀಶ್‌ ಎಸ್‌. ಅವರೂ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !