ದಾವಣಗೆರೆ: ಇಲ್ಲಿನ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕ್ವಿಟ್ ಇಂಡಿಯಾ ಚಳವಳಿಯ 78ನೇ ವರ್ಷಾಚರಣೆಯನ್ನು ಭಾನುವಾರ ಮಹಾನಗರ ಪಾಲಿಕೆ ಆವರಣದಲ್ಲಿ ಆಚರಿಸಲಾಯಿತು.

ಪಾಲಿಕೆ ಆವರಣದಲ್ಲಿರುವ ಮಹಾತ್ಮಗಾಂಧಿ, ಬಾಬು ಜಗಜೀವನರಾಂ, ಬಿ.ಆರ್. ಅಂಬೇಡ್ಕರ್ ಹಾಗೂ ಭಗತ್‌ಸಿಂಗ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಕಾರ್ಯಕರ್ತರು ವಂದೇ ಮಾತರಂ ಹಾಡಿ, ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿದರು.

ಕ್ವಿಟ್ ಇಂಡಿಯಾ ಚಳವಳಿ ವೇಳೆ ದಾವಣಗೆರೆಯಲ್ಲಿ ನಡೆದ ಗೋಲಿಬಾರ್‌ನಲ್ಲಿ ಹುತಾತ್ಮರಾದ ಹಳ್ಳೂರು ನಾಗಪ್ಪ, ಅಕ್ಕಸಾಲೆ ವಿರೂಪಾಕ್ಷಪ್ಪ, ಬಿದರಕುಂದಿ ನಿಂಗಪ್ಪ, ಹದಡಿ ನಿಂಗಪ್ಪ, ಹಮಾಲಿ ತಿಮ್ಮಣ್ಣ ಹಾಗೂ ಮಾಗಾನಹಳ್ಳಿ ಹನುಮಂತಪ್ಪ ಅವರನ್ನು ಸ್ಮರಿಸಲಾಯಿತು.

ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಯಶವಂತ ಜಾಧವ್, ಧೂಡಾ ಅಧ್ಯಕ್ಷ ರಾಜನಳ್ಳಿ ಶಿವಕುಮಾರ್,ಸದಸ್ಯರಾದ ದೇವಿರಮ್ಮ, ಡಿ.ಎಲ್. ರಾಮಚಂದ್ರಪ್ಪ, ಶಾಂತಮ್ಮ,ಮಂಡಲದ ಅಧ್ಯಕ್ಷ ಆನಂದ್ ರಾವ್ ಸಿಂಧೆ, ಜಿಲ್ಲಾ ಕಾರ್ಯದರ್ಶಿ ಗೋಪಾಲ್‌ರಾವ್ ಮಾನೆ, ಪ್ರಧಾನ ಕಾರ್ಯದರ್ಶಿ ನೀಲಗುಂದ ರಾಜು, ಟಿಂಕರ್ ಮಂಜಣ್ಣ, ಶ್ರೀಕಾಂತ್ ನಿಲಗುಂದ, ಶಿವಾನಂದ ಪಾಟೀಲ್, ನವೀನ್ ಕುಮಾರ್ ಎಚ್ ಬಿ, ಮಂಜುನಾಥ ಪೈ, ಪುಲೈ, ಶೋಭಾ ಕೊಟ್ರೇಶ್, ಸುಮಾ, ಮಲ್ಲಿಕಾರ್ಜುನ ಬಸಾಪುರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.