ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಜಿಲ್ಲೆಯಾದ್ಯಂತ ಮಳೆ: ಬಿತ್ತನೆಗೆ ಅನುಕೂಲ

Published 7 ಜೂನ್ 2024, 5:08 IST
Last Updated 7 ಜೂನ್ 2024, 5:08 IST
ಅಕ್ಷರ ಗಾತ್ರ

ದಾವಣಗೆರೆ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ಸಂಜೆ ಉತ್ತಮ ಮಳೆಯಾಗಿದೆ. ನಗರದಲ್ಲಿ ಸಂಜೆ 4.30ಕ್ಕೆ ಆರಂಭವಾದ ಮಳೆ ಒಂದು ಗಂಟೆ ಕಾಲ ರಭಸದಿಂದಲೇ ಸುರಿಯಿತು.

ನಗರ ಹಾಗೂ ನಗರದ ಹೊರವಲಯದಲ್ಲಿ ಸಂಜೆ ಮಳೆಯಾಗಿದ್ದು, ಶಾಲೆ ಬಿಡುವ ವೇಳೆಯಾಗಿದ್ದರಿಂದ ವಿದ್ಯಾರ್ಥಿಗಳು ಮಳೆಯಲ್ಲೇ ತೊಯ್ದು ಬರಬೇಕಾಯಿತು. ವಿದ್ಯಾರ್ಥಿಗಳು ಮಳೆಯನ್ನು ಆಸ್ವಾದಿಸಿದರು. ಕೆಲ ಬಡಾವಣೆಯಲ್ಲಿ ರಸ್ತೆಯಲ್ಲಿ ನೀರು ಹರಿಯಿತು.

ಒಂದು ವಾರ ಬಿಡುವು ನೀಡಿದ್ದ ಮಳೆ ಈಗ ಜೋರಾಗಿ ಸುರಿದಿದ್ದು, ರೈತರು ಮುಂಗಾರು ಹಂಗಾಮಿನ ಬಿತ್ತನೆಗೆ ಸಜ್ಜಾಗಿದ್ದಾರೆ.

ದಾವಣಗೆರೆಯ ಪಿ.ಬಿ.ರಸ್ತೆಯಲ್ಲಿ ಗುರುವಾರ ಸಂಜೆ ಸುರಿಯುತ್ತಿದ್ದ ಮಳೆಯಲ್ಲಿಯೇ ಮಹಿಳೆಯೊಬ್ಬರು ಕೊಡೆಯ ಸಹಾಯದಿಂದ ದ್ವಿಚಕ್ರ ವಾಹನದಲ್ಲಿ ಸಾಗಿದರು –ಪ್ರಜಾವಾಣಿ ಚಿತ್ರ/ ಸತೀಶ್ ಬಡಿಗೇರ್
ದಾವಣಗೆರೆಯ ಪಿ.ಬಿ.ರಸ್ತೆಯಲ್ಲಿ ಗುರುವಾರ ಸಂಜೆ ಸುರಿಯುತ್ತಿದ್ದ ಮಳೆಯಲ್ಲಿಯೇ ಮಹಿಳೆಯೊಬ್ಬರು ಕೊಡೆಯ ಸಹಾಯದಿಂದ ದ್ವಿಚಕ್ರ ವಾಹನದಲ್ಲಿ ಸಾಗಿದರು –ಪ್ರಜಾವಾಣಿ ಚಿತ್ರ/ ಸತೀಶ್ ಬಡಿಗೇರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT