ಸೋಮವಾರ, ಸೆಪ್ಟೆಂಬರ್ 20, 2021
21 °C

ತುಂಗಭದ್ರಾ ನದಿಯಲ್ಲಿ ಪ್ರವಾಹ: ದಾವಣಗೆರೆ ಜಿಲ್ಲೆಯಲ್ಲಿ ಮತ್ತಷ್ಟು ಸಂಕಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮಲೇಬೆನ್ನೂರು ಹೋಬಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಸುಕ್ಷೇತ್ರ ಉಕ್ಕಡಗಾತ್ರಿ ಗ್ರಾಮದಲ್ಲಿ ತುಂಗಭದ್ರಾ ನದಿಯಲ್ಲಿ ಪ್ರವಾಹ ಉಂಟಾಗಿದೆ.

ಉಕ್ಕಡಗಾತ್ರಿ ಕರಿಬಸವೇಶ್ವರ ದೇವಾಲಯದ ‌ಸ್ನಾನಘಟ್ಟ, ಜವಳದ ಕಟ್ಟೆ, ಹಣ್ಣು –ಕಾಯಿ ಪೂಜಾ ಸಾಮಗ್ರಿ ಮಾರಾಟದ ಅಂಗಡಿಗಳು ಮುಳುಗಡೆಯಾಗಿವೆ.

ಫತ್ಯಾಪುರ ಮೂಲಕ ನಂದಿಗುಡಿ ಸಂಪರ್ಕಿಸುವ ರಸ್ತೆ ಸೇತುವೆ ನದಿ ಹಿನ್ನೀರಿನಲ್ಲಿ ಮುಳುಗಿದೆ. ಭತ್ತದ ಗದ್ದೆ, ತೋಟಕ್ಕೆ ನೀರು ನುಗ್ಗಿದೆ. ಪಂಪ್‌ಸೆಟ್‌ಗಳು ಕೊಚ್ವಿಕೊಂಡು ಹೋಗಿವೆ‌. ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ.

ಹೋಬಳಿ ವ್ಯಾಪ್ತಿಯ ಹೊಳೆಸಿರಿಗೆರೆ, ಉಕ್ಕಡಗಾತ್ರಿ, ಕೊಪ್ಪ ಗ್ರಾಮದಲ್ಲಿ ಮೂರು ಮನೆಗಳು ಬಿದ್ದಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು