ಗುರುವಾರ , ಸೆಪ್ಟೆಂಬರ್ 16, 2021
24 °C

ದಾವಣಗೆರೆ: ‘ಅತಿವೃಷ್ಟಿ ತಾಲ್ಲೂಕಾಗಿ ಘೋಷಿಸಲು ಮನವಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನ್ಯಾಮತಿ: ಕಳೆದ ಒಂದು ವಾರದಿಂದ ಅವಳಿ ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಅತಿವೃಷ್ಟಿಪೀಡಿತ ತಾಲ್ಲೂಕು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡುವುದಾಗಿ ಶಾಸಕ ಎಂ.ಪಿ. ರೇಣುಕಾಚಾರ್ಯ ಭರವಸೆ ನೀಡಿದರು.

ತಾಲ್ಲೂಕಿನ ಸೋಗಿಲು, ಚಟ್ನಳ್ಳಿ, ಗಂಜೇನಹಳ್ಳಿ, ಫಲವನಹಳ್ಳಿ, ಕುಂಕುವಾ, ಒಡೆಯರಹತ್ತೂರು, ಗಂಗನಕೋಟೆ, ಕಂಕನಹಳ್ಳಿ, ಕೊಡಚಗೊಂಡನಹಳ್ಳಿ, ದಾನಿಹಳ್ಳಿ, ಆರುಂಡಿ, ರಾಮೇಶ್ವರ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿ ಮಾತನಾಡಿದರು.

ತಾಲ್ಲೂಕಿನ ಹಿರೇಹಳ್ಳ ತುಂಬಿರುವುದರಿಂದ ಗಂಜೇನಹಳ್ಳಿ-ಸಾಲಬಾಳು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲು ಅಂದಾಜುವೆಚ್ಚದ ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಉಪತಹಶೀಲ್ದಾರ್ ಎನ್. ನಾಗರಾಜ, ಆರ್‌ಐ ಸುಧೀರ್, ಕೆಎಸ್‌ಡಿಎಲ್ ನಿರ್ದೇಶಕ ಶಿವು ಹುಡೇದ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.