ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತ್ತಲಾದ ಮೇಲೆ ಸುರಿವ ಮಳೆ

Last Updated 5 ಆಗಸ್ಟ್ 2022, 3:44 IST
ಅಕ್ಷರ ಗಾತ್ರ

ದಾವಣಗೆರೆ: ಕಳೆದ ಮೂರು ದಿನಗಳಿಂದ ರಾತ್ರಿ ಜೋರಾಗಿ ಮಳೆ ಸುರಿಯುತ್ತಿದ್ದು, ಗುರುವಾರವೂ ಅದು ಮುಂದುವರಿಯಿತು. ರಾತ್ರಿ ಸುಮಾರು 8 ಗಂಟೆಯ ಹೊತ್ತಿಗೆ ಗುರುವಾರ ಮಳೆ ಆರಂಭಗೊಂಡಿತು.

ಜಿಲ್ಲೆಯಲ್ಲಿ ಬುಧವಾರ 6 ಮಿ.ಮೀ. ಮಳೆಯಾಗಿದೆ. ₹ 50.95 ಲಕ್ಷ ಅಂದಾಜು ಹಾನಿಯಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 10 ಮನೆಗಳಿಗೆ ಹಾನಿಯಾಗಿದೆ. 40.15 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆ ಹಾನಿಗೀಡಾಗಿದೆ. ಹರಿಹರ ತಾಲ್ಲೂಕಿನಲ್ಲಿ 5, ಹೊನ್ನಾಳಿ ತಾಲ್ಲೂಕಿನಲ್ಲಿ 6 ಮನೆಗಳಿಗೆ ಹಾನಿಯಾಗಿದೆ. ನ್ಯಾಮತಿ ತಾಲ್ಲೂಕಿನಲ್ಲಿ 5 ಮನೆ ಮತ್ತು ದನದ ಒಂದು
ಕೊಟ್ಟಿಗೆ, ಚನ್ನಗಿರಿ ತಾಲ್ಲೂಕಿನಲ್ಲಿ 8 ಮನೆಗಳಿಗೆ, ಜಗಳೂರು ತಾಲ್ಲೂಕಿನಲ್ಲಿ 5 ಮನೆಗಳಿಗೆ ಹಾನಿಯಾಗಿದೆ.

ಮಳೆ ವಿವರ: ಚನ್ನಗಿರಿ ತಾಲ್ಲೂಕಿನಲ್ಲಿ 8 ಮಿ.ಮೀ., ದಾವಣಗೆರೆ ತಾಲ್ಲೂಕಿನಲ್ಲಿ 1.2 ಮಿ.ಮೀ., ಹರಿಹರದಲ್ಲಿ 1.6 ಮಿ.ಮೀ., ಹೊನ್ನಾಳಿ ತಾಲ್ಲೂಕಿನಲ್ಲಿ 0.4 ಮಿ.ಮೀ., ಜಗಳೂರು ತಾಲ್ಲೂಕಿನಲ್ಲಿ 0.4 ಮಿ.ಮೀ., ನ್ಯಾಮತಿಯಲ್ಲಿ 0.4 ಮಿ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT