ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಬೆಳೆಗಳಿಗೂ ಶೀಘ್ರದಲ್ಲಿ ಪರಿಹಾರ: ಬೈರತಿ ಬಸವರಾಜ

ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಉಸ್ತುವಾರಿ ಸಚಿವರ ಭೇಟಿ
Last Updated 22 ಮೇ 2022, 2:18 IST
ಅಕ್ಷರ ಗಾತ್ರ

ಚನ್ನಗಿರಿ: ‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಭಾರಿ ಮಳೆಗೆ 2,232 ಎಕರೆ ಫಸಲಿಗೆ ಬಂದಿದ್ದ ಭತ್ತ ಹಾಗೂ 500 ಎಕರೆ ಮಾವು ಬೆಳೆ ಹಾನಿಯಾಗಿದೆ. ಅತಿ ಶೀಘ್ರದಲ್ಲಿ ಎಲ್ಲ ಬೆಳೆಗಳಿಗೂ ಸರ್ಕಾರದಿಂದ ಬೆಳೆ ಪರಿಹಾರ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.

ತಾಲ್ಲೂಕಿನ ಮೆದಿಕೆರೆ, ಸಿದ್ದನಮಠ, ತೋಪೇನಹಳ್ಳಿ, ಮಂಗೇನಹಳ್ಳಿ ಗ್ರಾಮಗಳಲ್ಲಿ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಅವರು ಮಾತನಾಡಿದರು.

‘ಅತಿ ಶೀಘ್ರದಲ್ಲಿ ಬೆಳೆ ಹಾನಿಗೊಳಗಾದ ರೈತರ ಪಟ್ಟಿಯನ್ನು ತಯಾರಿಸಿ, ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರದ ಮೊತ್ತವನ್ನು ಜಮೆ ಮಾಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಕಳೆದ ವರ್ಷ ಈ ಕ್ಷೇತ್ರದಲ್ಲಿ ₹ 3.13 ಕೋಟಿ ಬೆಳೆ ವಿಮೆ ಪರಿಹಾರವನ್ನು ನೀಡಲಾಗಿದೆ. ಭತ್ತದ ಬೆಳೆಗೆ ಹೆಕ್ಟೇರ್‌ಗೆ ₹ 13,500 ಹಾಗೂ ಮಾವು ಬೆಳೆಗೆ ₹ 6 ಸಾವಿರ ಪರಿಹಾರ ನೀಡಲಾಗುವುದು’
ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ, ಕೆಎಸ್‌ಡಿಎಲ್ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಉಪ ವಿಭಾಗಾಧಿಕಾರಿ ತಿಮ್ಮಣ್ಣ ಹುಲುಮನಿ, ಜಿಲ್ಲಾ ಪಂಚಾಯಿತಿ ಸಿಇಓ ಡಾ. ಚನ್ನಪ್ಪ, ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ತಹಶೀಲ್ದಾರ್ ಡಾ.ಪಟ್ಟರಾಜಗೌಡ, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ಡಿವೈಎಸ್‌ಪಿ ಡಾ. ಸಂತೋಷ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್ ಮಲ್ಲಾಡದ, ತೋಟಗಾರಿಕೆ ಇಲಾಖೆಯ ರೋಹಿತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT