ಶನಿವಾರ, ಅಕ್ಟೋಬರ್ 8, 2022
23 °C

ಮೀಸಲಾತಿ ಹೆಚ್ಚಳಕ್ಕೆ ದನಿ ಎತ್ತುವೆ: ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನ್ಯಾಮತಿ: ‘ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸೋಮವಾರದಿಂದ ಆರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತುವೆ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭರವಸೆ ನೀಡಿದರು.

ಪಟ್ಟಣದಲ್ಲಿ ಶನಿವಾರ ಕರ್ನಾಟಕ ಸ್ವಾಭಿಮಾನಿ ಎಸ್‌ಸಿ-ಎಸ್‌ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ, ನ್ಯಾಮತಿ ತಾಲ್ಲೂಕು ವಾಲ್ಮೀಕಿ ಸಮುದಾಯದ ಮುಖಂಡರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

‘ಮೀಸಲಾತಿ ಹೆಚ್ಚಳ ಪ್ರಸ್ತಾವಕ್ಕೆ ಬಿ.ಎಸ್.ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿಗೆ ಭರವಸೆ ನೀಡಿದ್ದಾರೆ. ಅಧಿವೇಶನದಲ್ಲಿ ಪ್ರಸ್ತಾಪ ಮಾಡುವೆ’ ಎಂದರು.

ನ್ಯಾಮತಿ ತಾಲ್ಲೂಕು ವಾಲ್ಮೀಕಿ ನಾಯಕ ಸಮುದಾಯದ ಅಧ್ಯಕ್ಷ ಬಿ. ಸೋಮಶೇಖರ ಮತ್ತು ಪದಾಧಿಕಾರಿಗಳು ಹಾಗೂ ವಿವಿಧ ಗ್ರಾಮಗಳ ಮುಖಂಡರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.