ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಸೇತುವೆಗೆ ‘ಸಂಗೊಳ್ಳಿ ರಾಯಣ್ಣ’ ಹೆಸರು: ಸಚಿವರ ಭರವಸೆ

Last Updated 15 ಆಗಸ್ಟ್ 2020, 15:39 IST
ಅಕ್ಷರ ಗಾತ್ರ

ದಾವಣಗೆರೆ: ಬಿಎಸ್‌ಎನ್‌ಎಲ್‌ ಸಮೀಪದ ರೈಲ್ವೆ ಕ್ರಾಸ್‌ನ ಬಳಿ ಇರುವ ಮೇಲ್ಸೇತುವೆಗೆ ‘ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ’ ಎಂದು ನಾಮಕರಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಭರವಸೆ ನೀಡಿದರು.

‘ಆಗಸ್ಟ್ 15 ಸಂಗೊಳ್ಳಿ ರಾಯಣ್ಣ ಜನ್ಮದಿನ. ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ನಾಮಕರಣ ಮಾಡಲು ಮಹಾನಗರಪಾಲಿಕೆ ಹಾಗೂ ಧೂಡಾ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಶೀಘ್ರದಲ್ಲಿಯೇ ನೆರವೇರಿಸಲಾಗುವುದು’ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೊರೊನಾದಿಂದ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಿಸಲುಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆ ನಡೆಸುವಂತೆ ಅಂದರೆ ಪ್ರತಿ ದಿವಸ 3 ಸಾವಿರ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

‘ಕೊರೊನಾ ಸಂದರ್ಭದಲ್ಲಿ 3 ವರ್ಷ ಪೂರೈಸಿದ ವೈದ್ಯಕೀಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಸೇವೆಗೆ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದ್ದು, ರಾಜ್ಯದಲ್ಲಿ 3 ಸಾವಿರ ವಿದ್ಯಾರ್ಥಿಗಳು ಇದ್ದು, ಜಿಲ್ಲೆಯಲ್ಲಿ 150ರಿಂದ 200 ಮಂದಿ ಈಗಾಗಲೇ ಸೇವೆ ಸಲ್ಲಿಸುತ್ತಿದ್ದು, ಅವರನ್ನು ಮುಂದುವರಿಸಲಾಗುವುದು. ಜೆಜೆಎಂ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿಗಳ 16 ತಿಂಗಳ ವೇತನ ನೀಡಲು ಕ್ರಮ ಕೈಗೊಂಡಿದ್ದು, ನಂತರದ ವೇತನ ನೀಡುವ ಸಂಬಂಧ ಆಡಳಿತ ಮಂಡಳಿ ಚರ್ಚೆ ನಡೆಸಲಿದೆ’ ಎಂದರು.

‘ಡಿ.ಜೆ.ಹಳ್ಳಿಯಲ್ಲಿ ನಡೆದ ಘಟನೆ ಸಂಬಂಧ ಗುಪ್ತಚರ ಇಲಾಖೆ ವೈಫಲ್ಯವಿಲ್ಲ. ಇದು ಪೂರ್ವ ನಿಯೋಜಿತ ಯೊಜನೆ. ಯಾರಿಗೂ ಗೊತ್ತಾಗದ ರೀತಿಯಲ್ಲಿ ಮಾಡಿದ್ದಾರೆ. ವಾಟ್ಸ್‌ಆ್ಯಪ್ ಮೂಲಕ ಜನರನ್ನು ಸಂಘಟಿಸಿ ಕೆಲಸ ಮಾಡಿದ್ದಾರೆ.ದೇಶದ್ರೋಹದ ಕೆಲಸ ಯಾರೇ ಮಾಡಿದರೂ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT