ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ಆರಂಭ

Last Updated 8 ಫೆಬ್ರುವರಿ 2021, 7:32 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಎರಡು ದಿನಗಳ ಮೂರನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ಆರಂಭಗೊಂಡಿತು.

ಮಠದ 23ನೇ ವಾರ್ಷಿಕೋತ್ಸವ, ದಿವಂಗತ ಪುಣ್ತಾನಂದಪುರಿ ಸ್ವಾಮೀಜಿ 14ನೇ ಪುಣ್ಯಾರಾಧನೆ ಹಾಗೂ ಪ್ರಸನ್ನಾನಂದ ಸ್ವಾಮೀಜಿಯ 13ನೇ ವರ್ಷದ ಪಟ್ಟಾಧಿಕಾರ ಮಹೋತ್ಸವಕ್ಕೆ ಸಂಭ್ರಮದಿಂದ ಚಾಲನೆ ನೀಡಲಾಯಿತು.

ರಾಜನಹಳ್ಳಿ ಗ್ರಾಮದಿಂದ ಮಠದ ಆವರಣದಲ್ಲಿ ಮಾಜಿ ಸಚಿವ ದಿವಂಗತ ಚಳ್ಳಕೆರೆ ತಿಪ್ಪೇಸ್ವಾಮಿ ವೇದಿಕೆವರೆಗೆ ಬೆಳಿಗ್ಗೆ ವಾಲ್ಮೀಕಿ ಭಾವಚಿತ್ರ ಮೆರವಣಿಗೆಯು ವೈಭವದಿಂದ ನಡೆಯಿತು. ಪೂರ್ಣಕುಂಭ ಹೊತ್ತ ಮಹಿಳೆಯರು ಹಾಗೂ ಜನಪದ ಕಲಾ ತಂಡದವರು ಮೆರವಣಿಗೆಗೆ ಮೆರುಗು ನೀಡಿದರು.
ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುದ ಸಾಧಕರನ್ನು ಸನ್ಮಾನಿಸಲಾಯಿತು.

ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶ, ಪರಿಶಿಷ್ಟ ಪಂಗಡಗಳ ನೌಕರರ ಸಮಾವೇಶ, ಬುಡಕಟ್ಟು ಸಮುದಾಯಗಳ ಸಂಘಟನೆ, ಮತ್ತು ಸವಾಲುಗಳು ಸಮಾವೇಶ ನಡೆಯಲಿದೆ. ದೇಶದ ವಿಧೆಡೆಯಿಂದ ಬಂದ ಕಲಾವಿದರು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದು, ಬುಡಕಟ್ಟು ಸಮುದಾಯದ ಕಲೆ ಅನಾವರಣಗೊಳ್ಳಲಿದೆ.

ವಾಲ್ಮೀಕಿ ಸಮಾಜದ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಿರುವ ಈ ಜಾತ್ರೆಗೆ ರಾಜ್ಯದ ವಿವಿಧೆಯಿಂದ ಸಾವಿರಾರು ಜನ ರಾಜನಹಳ್ಳಿಗೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT