ಸೋಮವಾರ, ನವೆಂಬರ್ 28, 2022
20 °C

‘ಸ್ತ್ರೀ ಸಮಾನತೆಗೆ ರಾಜಾರಾಮ್ ಮೋಹನ್ ರಾಯ್ ಕೊಡುಗೆ ಅಪಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಸಮಾಜ ಸುಧಾರಕ ರಾಜಾರಾಮ್ ಮೋಹನ್ ರಾಯ್‍ ಅವರು ಸ್ತ್ರೀ ಸಮಾನತೆಗೆ ಹೋರಾಡಿದ ಅಗ್ರಗಣ್ಯ ವ್ಯಕ್ತಿ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ. ಫಾಲಾಕ್ಷಿ ಹೇಳಿದರು.

ರಾಜಾರಾಮ್ ಮೋಹನ್ ರಾಯ್ ಅವರ 250ನೇ ಜನ್ಮ ದಿನದ ಪ್ರಯುಕ್ತ ಕೇಂದ್ರ ಗ್ರಂಥಾಲಯವು ನಗರ ಕೇಂದ್ರ ಗ್ರಂಥಾಲಯದಲ್ಲಿ ಮಂಗಳವಾರ ಆಯೋಜಿಸಿದ ಮಹಿಳಾ ಜಾಗೃತಿ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹ, ಸತಿಸಹಗಮನ ಪದ್ಧತಿಯಂಥ ಸಾಮಾಜಿಕ ಪಿಡುಗುಗಳನ್ನು ತೊಡೆದು ಹಾಕಲು ಶ್ರಮಿಸಿದ್ದರು.

ಜಾಥಾ ಉದ್ಘಾಟನೆ: ಕಾರ್ಯಕ್ರಮಕ್ಕೂ ಮುನ್ನ ನಗರ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಮಹಿಳಾ ಜಾಗೃತಿ ಕುರಿತ ಜಾಥಾಕ್ಕೆ ಮೇಯರ್‌ ಆರ್. ಜಯಮ್ಮ ಗೋಪಿನಾಯ್ಕ್‌ ಚಾಲನೆ
ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಿರಂಜನಮೂರ್ತಿ, ಜಿಲ್ಲಾ ಕೇಂದ್ರ ಗ್ರಂಥಾಲಯ ಉಪನಿರ್ದೇಶಕ ಪಿ.ಆರ್. ತಿಪ್ಪೇಸ್ವಾಮಿ, ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಶಾಂತ ಭಟ್‌ ಮುಂತಾದವರು
ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು