ಭಾನುವಾರ, ಏಪ್ರಿಲ್ 18, 2021
31 °C

ತೆಲಂಗಾಣ ಮಾದರಿಯಲ್ಲಿ ಮರಳು ವಿತರಣೆಗೆ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ತೆಲಂಗಾಣ ಮಾದರಿಯಲ್ಲಿ ಮರಳು ವಿತರಿಸಲು ಚಿಂತನೆ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ರಾಜಶೇಖರ್ ಬಿ ಪಾಟೀಲ್ ತಿಳಿಸಿದರು.

 ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂರನೇ ತಾರೀಕಿನಂದು ಮರಳಿನ ವಿಚಾರವಾಗಿ ಸಬ್ ಕಮಿಟಿ ಮೀಟಿಂಗ್ ಇದೆ.  ಪರಮೇಶ್ವರ್ ನೇತೃತ್ವದಲ್ಲಿ ಕಮಿಟಿ ಮಾಡಲಾಗಿದೆ. ನಾಳೆಯ ಸಭೆ ಬಳಿಕ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ರಮೇಶ್ ಜಾರಕಿಹೊಳಿ , ಆನಂದ್ ಸಿಂಗ್ ರಾಜಿನಾಮೆ ಕೊಟ್ಟಿದ್ದಾರೆ ಎಂಬುದನ್ನ ಮಾಧ್ಯಮಗಳ ಮೂಲಕ ನೋಡಿದ್ದೇನೆ.
ಆನಂದ್ ಸಿಂಗ್ ರಾಜಿನಾಮೆಗೆ ಬೇರೆ ಕಾರಣ ಇದೆ. ಸರ್ಕಾರ ರಚನೆಯಾದಾಗಿನಿಂದಲೂ   ಬೀಳಿಸಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದರು.

ಶಾಮನೂರು ಶಿವಶಂಕರಪ್ಪ ಮನೆಯಲ್ಲಿ ಊಟ ಮಾಡಿ ಬಂದಿದ್ದೇನೆ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ನಿಗದಿತ ಕಾರ್ಯಕ್ರಮಕ್ಕೆ ಸಿಎಂ ಅಮೆರಿಕಕ್ಕೆ ಹೋಗಿದ್ದಾರೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು