ಜಗಳೂರು: ಸೂಲಗಿತ್ತಿ ಸೇವೆ ಸಲ್ಲಿಸುತ್ತಿದ್ದ,ಜಗಳೂರು ಗೊಲ್ಲರಹಟ್ಟಿ ಗ್ರಾಮದ ಸುಲ್ತಾನ್‌ಬಿ (85) ಸೋಮವಾರ ನಿಧನರಾದರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಆರು ದಶಕಗಳಿಂದ ಗ್ರಾಮೀಣ ಭಾಗದಲ್ಲಿ ಸಾವಿರಾರು ಹೆರಿಗೆ ಮಾಡಿಸುವ ನಿಸ್ವಾರ್ಥ ಸೇವೆಯಿಂದ ಹೆಸರಾಗಿದ್ದರು. ಅವರ ಸೇವೆ ಪರಿಗಣಿಸಿ ರಾಜ್ಯ ಸರ್ಕಾರವು 2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಪುತ್ರ, ಪುತ್ರಿ ಹಾಗೂ ಪತಿಯ ಅಗಲಿಕೆಯ ಬಳಿಕ ಇವರು ಗ್ರಾಮದಲ್ಲಿ ಒಂಟಿಜೀವನ ನಡೆಸುತ್ತಿದ್ದರು.
ಸೋಮವಾರ ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.