ದಾವಣಗೆರೆ: ಮನೆಯ ಮುಂದೆ ಆಟವಾಡುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಅಪರಾಧಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿದೆ.

ಕಳೆದ ಏಪ್ರಿಲ್ 15ರಂದು ಮಧ್ಯಾಹ್ನದ ವೇಳೆ ಆರೋಪಿಯ ಮನೆ ಎದುರು ಆಟವಾಡುತ್ತಿದ್ದ ಬಾಲಕಿಯನ್ನು ಅಪರಾಧಿ ಎಳೆದೊಯ್ದು ಬಟ್ಟೆ ಬಿಚ್ಚಿ ಮಂಚದ ಮೇಲೆ ಮಲಗಿಸಿದ್ದಾನೆ. ಇದನ್ನು ನೋಡಿದ ಫಿರ್ಯಾದಿಯು ಬಾಲಕಿಯನ್ನು ರಕ್ಷಿಸಿ ಕರೆತಂದಿದ್ದಾರೆ.

ಶುಕ್ರವಾರ ವಿಚಾರಣೆ ನಡೆದು ನ್ಯಾಯಾಧೀಶರಾದ ಶ್ರೀಪಾದ ಎನ್. ಅವರು ಶಿಕ್ಷೆ ಪ್ರಕಟಿಸಿದ್ದಾರೆ. ದಂಡ ಕೊಡಲು ತಪ್ಪಿದ್ದಲ್ಲಿ ಇನ್ನೂ ಎರಡು ವರ್ಷ ಸಾದಾ ಶಿಕ್ಷೆಯನ್ನು ವಿಧಿಸಿದ್ದಾರೆ. ದಂಡದ ಹಣದಲ್ಲಿ ₹15 ಸಾವಿರವನ್ನು ನೊಂದ ಬಾಲಕಿಗೆ ನೀಡಬೇಕು. ಸರ್ಕಾರದಿಂದ ₹ 3 ಲಕ್ಷ ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ನಗರ ಉಪವಿಭಾಗದ ಡಿವೈಎಸ್ಪಿ ಎಸ್.ಎಂ. ನಾಗರಾಜ್ ಅವರು ತನಿಖೆ ನಡೆಸಿ ವರದಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಕೆ. ನಾಗರಾಜ್ ಆಚಾರ್ ಸಾಕ್ಷಿ ವಿಚಾರಣೆ ನಡೆಸಿದ್ದರು. ಸರ್ಕಾರಿ ಅಭಿಯೋಜಕ ಕೆ.ಜಿ. ಜಯಪ್ಪ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.