ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ | ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಶಿಕ್ಷೆ

Published 4 ಜುಲೈ 2024, 15:44 IST
Last Updated 4 ಜುಲೈ 2024, 15:44 IST
ಅಕ್ಷರ ಗಾತ್ರ

ದಾವಣಗೆರೆ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಸಂಬಂಧ ಅಪರಾಧಿಗೆ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹ 1 ಲಕ್ಷ ದಂಡ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಎಫ್.ಟಿ.ಎಸ್.ಸಿ-1 ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಹರಿಹರದ ಹಳೆ ಹರ್ಲಾಪುರದ ಸೈಯದ್‌ ಮೋಸಿನ್‌ (19) ಶಿಕ್ಷೆಗೆ ಗುರಿಯಾದ ಅಪರಾಧಿ.

ಈತ ಬಾಲಕಿಯೊಬ್ಬಳನ್ನು ಅಪಹರಿಸಿಕೊಂಡು ಹೋಗಿ ಹಲವು ಬಾರಿ ಅತ್ಯಾಚಾರ ಮಾಡಿದ್ದ ಎಂದು 2020ರ ಡಿಸೆಂಬರ್‌ನಲ್ಲಿ ಹರಿಹರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಅಂದಿನ ಸಿಪಿಐ ಸತೀಶಕುಮಾರ್‌ ಯು. ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಎಫ್.ಟಿ.ಎಸ್.ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ್ ನಾರಾಯಣ ಹೆಗಡೆ ಅವರು ಅಪರಾಧಿಗೆ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹ 1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಮೊತ್ತವನ್ನು ಪ್ರಕರಣದ ಸಂತ್ರಸ್ತೆಗೆ ನೀಡುವಂತೆ ಆದೇಶಿಸಿದ್ದಾರೆ.

ಸಂತ್ರಸ್ತೆ ಪರ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT