ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ | ಬಾಲಕಿ ಮೇಲೆ ಅತ್ಯಾಚಾರ; 20 ವರ್ಷ ಶಿಕ್ಷೆ

Published 31 ಜನವರಿ 2024, 15:48 IST
Last Updated 31 ಜನವರಿ 2024, 15:48 IST
ಅಕ್ಷರ ಗಾತ್ರ

ದಾವಣಗೆರೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಎಫ್.ಟಿ.ಎಸ್.ಸಿ-1 ನ್ಯಾಯಾಲಯವು 20 ವರ್ಷ ಶಿಕ್ಷೆ ಹಾಗೂ ₹ 25,000 ದಂಡ ವಿಧಿಸಿದೆ.

ಜಿಲ್ಲೆಯ ನಗರವೊಂದರಲ್ಲಿ 2020ರಲ್ಲಿ ಅಪರಾಧಿ ಮಕ್ಸೂದ್‌ ಅಹ್ಮದ್ ಅಪ್ರಾಪ್ತ ಬಾಲಕಿಗೆ ಚಾಕ್‌ಲೇಟ್‌ ಆಸೆ ತೋರಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಹರಿಹರ ನಗರ ಠಾಣೆಯಲ್ಲಿ ಈ ಬಗ್ಗೆ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಸಿಪಿಐ ಶಿವಪ್ರಸಾದ್ ಎಂ. ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಆರೋಪ ಸಾಬೀತಾಗಿದ್ದರಿಂದ ನ್ಯಾಯಾಧೀಶರಾದ ಶ್ರೀಪಾದ್ ಎನ್. ಅವರು ಅಪರಾಧಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದರು. ಸಂತ್ರಸ್ತೆಗೆ ಸರ್ಕಾರದಿಂದ ₹ 6 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದರು.

ದೂರುದಾರರ ಪರ ಸರ್ಕಾರಿ ವಕೀಲೆ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT