ಹರಪನಹಳ್ಳಿ:ತಾಲ್ಲೂಕಿನ ತಾಂಡಾವೊಂದರಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ರಾಜಾನಾಯ್ಕ (34)ನನ್ನು ಪೊಲೀಸರು ಬಂಧಿಸಿದ್ದಾರೆ.

8ನೇ ತರಗತಿ ಓದುತ್ತಿದ್ದ ಬಾಲಕಿ ಸಂಬಂಧಿ ರಾಜಾನಾಯ್ಕ ಮನೆಗೆ ಟಿ.ವಿ. ನೋಡಲು ಹೋಗುತ್ತಿದ್ದಳು. ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಪದೇ ಪದೇ ಅತ್ಯಾಚಾರ ಮಾಡಿದ್ದಾನೆ.

ಮೇ 15ರಂದು ಬಾಲಕಿ ಶೌಚಾಲಯಕ್ಕೆ ಊರ ಹೊರಗೆ ಹೋಗಿದ್ದಾಗ ಬಲವಂತವಾಗಿ ಅರಳಿಹಳ್ಳಿ ತಾಂಡಾಗೆ ಕರೆದುಕೊಂಡು ಹೋಗಿ ಸಂಬಂಧಿಕರ ಮನೆಯಲ್ಲಿಟ್ಟಿದ್ದ.

ನಾಪತ್ತೆಯಾಗಿದ್ದ ಬಾಲಕಿಯ ಬಗ್ಗೆ ಪೋಷಕರು ವಿಚಾರಿಸಿದಾಗ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿ ತಾಯಿ ಬುಧವಾರ ದೂರು ನೀಡಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಸಹಕರಿಸಿದ ಆರೋಪಿರವಿನಾಯ್ಕ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.