ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

7

ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Published:
Updated:

ಹರಪನಹಳ್ಳಿ: ತಾಲ್ಲೂಕಿನ ಗ್ರಾಮವೊಂದರಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಕಂಡಿಕೇರಿ ತಾಂಡಾದ ಲಕ್ಷ್ಮಣ (30) ಬಂಧಿತ. ಸಂತ್ರಸ್ತೆ ಬಾಲಕಿಯ ತಂದೆ–ತಾಯಿಯ ಜತೆ ಆರೋಪಿ ಲಕ್ಷ್ಮಣ 4 ವರ್ಷಗಳ ಹಿಂದೆ ಎನ್.ಆರ್.ಪುರ ತಾಲ್ಲೂಕಿನ ಗುಡ್ಡಿಹಳ್ಳಿ ಗ್ರಾಮದ ಬಳಿಯ ಕಾಫಿ ಎಸ್ಟೇಟ್‌ನಲ್ಲಿ ಒಂದೇ ಮನೆಯಲ್ಲಿದ್ದುಕೊಂಡು ಕೂಲಿ ಕೆಲಸ ಮಾಡುತ್ತಿದ್ದರು.

ಬಾಲಕಿ ಅಲ್ಲಿಯೇ 5ನೇ ತರಗತಿ ಅಭ್ಯಾಸ ಮಾಡುತ್ತಿದ್ದಳು. ಜುಲೈ 22ರಂದು ಎಲ್ಲರೂ ಕಾಫಿ ಎಸ್ಟೇಟ್‌ನಿಂದ ಸ್ವಗ್ರಾಮಕ್ಕೆ ಬಂದಿದ್ದಾರೆ. ಜುಲೈ 25ರಂದು ಆರೋಪಿ ಬಾಲಕಿಯನ್ನು ಕರೆದುಕೊಂಡು ಗ್ರಾಮದಿಂದ ಪರಾರಿಯಾಗಿದ್ದಾನೆ.

ಆಗಸ್ಟ್‌ 6ರಂದು ಹಲುವಾಗಲು ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಮಂಗಳವಾರ ಬೆಳಿಗ್ಗೆ ಬಾಲಕಿ ಹಾಗೂ ಲಕ್ಷ್ಮಣ ಇಬ್ಬರೂ ದಾವಣಗೆರೆಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಅತ್ಯಾಚಾರ ಎಸಗಿರುವ ಮಾಹಿತಿಯನ್ನು ಬಾಲಕಿ ನೀಡಿದ್ದಾಳೆ.

‘6-7 ತಿಂಗಳ ಹಿಂದೆ ಆರೋಪಿ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂಬ ಸಂಶಯವಿದೆ. ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಂದೆ ದೂರಿನ ಮೇರೆಗೆ ಹಲುವಾಗಲು ಪೊಲೀಸ್ ಠಾಣೆಯಲ್ಲಿ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸರ್ಕಲ್ ಇನ್‌ಸ್ಪೆಕ್ಟರ್‌ ಡಿ. ದುರುಗಪ್ಪ ತನಿಖೆ ಕೈಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !