ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ: ಉಪನ್ಯಾಸಕನಿಗೆ 10 ವರ್ಷ ಜೈಲು

Last Updated 18 ಫೆಬ್ರುವರಿ 2020, 10:49 IST
ಅಕ್ಷರ ಗಾತ್ರ

ದಾವಣಗೆರೆ: ತಾಲ್ಲೂಕಿನ 17 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಉಪನ್ಯಾಸಕ ಜಗಳೂರು ತಾಲ್ಲೂಕಿನ ದಾದಾಪೀರ್‌ಗೆ ಪೋಕ್ಸೊ ಕಾಯ್ದೆ ಅಡಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೊ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಮತ್ತು ₹ 41 ಸಾವಿರ ದಂಡ ವಿಧಿಸಿದೆ.

2018ರಲ್ಲಿ ದ್ವಿತೀಯ ‍ಪಿಯುಸಿ ವಿದ್ಯಾರ್ಥಿನಿಯನ್ನು ಹುಬ್ಬಳ್ಳಿ, ಗದಗ, ಕರ್ನೂಲ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿತ್ತು.

ಇನ್‌ಸ್ಪೆಕ್ಟರ್‌ ಗುರುಬಸವರಾಜ ಈ ಬಗ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಎಸ್. ನಾಗಾಶ್ರೀ ಅವರು ಶಿಕ್ಷೆ ವಿಧಿಸಿ ತೀರ್ಪಿತ್ತಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶೌಕತ್ ಅಲಿ ಎಸ್.ಎಚ್.ಎಸ್. ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT