ದಾವಣಗೆರೆ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಸತತ ಎರಡನೇ ಬಾರಿ ಕಪ್ ಎತ್ತಿ ಹಿಡಿದು ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.

ಫೈನಲ್ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಆರ್ಸಿಬಿ ಗೆಲುವು ಗಳಿಸುತ್ತಿದ್ದಂತೆ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದರು.

ನಗರದ ಎವಿಕೆ ರಸ್ತೆಯಿಂದ ಅಂಬೇಡ್ಕರ್ ವೃತ್ತಕ್ಕೆ ಸಾಗುವ ಮಾರ್ಗದಲ್ಲಿರುವ ಬಿ.ಎಸ್.ಚನ್ನಬಸಪ್ಪ ಆ್ಯಂಡ್ ಸನ್ಸ್ ಜವಳಿ ಅಂಗಡಿಯ ಮುಂದೆ ಕ್ರಿಕೆಟ್ ಪಂದ್ಯದ ವೀಕ್ಷಣೆಗಾಗಿ ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿತ್ತು. ಆರ್ಸಿಬಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಹಾಗೂ ಅಕ್ಕ ಪಕ್ಕ ನಿಂತು ಆಟ ಕಣ್ತುಂಬಿಕೊಂಡರು.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ (ಜಿಟಿ) ತಂಡದ ಆರಂಭಿಕ ಬ್ಯಾಟರ್ಗಳ ವಿಕೆಟ್ ಪತನವಾಗುತ್ತಿದ್ದಂತೆ ಆರ್ಸಿಬಿ ಅಭಿಮಾನಿಗಳು ಶಿಳ್ಳೆ– ಕೇಕೆ ಹಾಕಿ ಸಂಭ್ರಮಿಸಿದರು. ಚಿಣ್ಣರು ಹಾಗೂ ಯುವಕರು ನೃತ್ಯ ಮಾಡಿ ಖುಷಿ ಪಟ್ಟರು. ಎದುರಾಳಿ ತಂಡದ ವಿಕೆಟ್ ಪತನವಾದಾಗಲೆಲ್ಲಾ ಆರ್ಸಿಬಿ.. ಆರ್ಸಿಬಿ.. ಘೋಷಣೆಗಳು ಮೊಳಗುತ್ತಿದ್ದವು.

ಆರ್ಸಿಬಿ ತಂಡದ ಬ್ಯಾಟ್ಸ್ಮನ್ಗಳು ಬೌಂಡರಿ, ಸಿಕ್ಸರ್ಗಳನ್ನು ಸಿಡಿಸಿದಾಗಲೂ ಅಭಿಮಾನಿಗಳ ಸಂಭ್ರಮ ಮೇರೆ ಮೀರುತ್ತಿತ್ತು. ರಾಮ್ ಆ್ಯಂಡ್ ಕೋ ವೃತ್ತ, ಗುಂಡಿ ವೃತ್ತ ಸೇರಿದಂತೆ ವಿವಿಧೆಡೆ ಜಮಾಯಿಸಿದ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.