ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕರು, ರಿಜಿಸ್ಟ್ರಾರ್ ಸಹಾಯಕರು ಮತ್ತು ಆಫೀಸ್ ಸೂಪರಿಟೆಂಡೆಂಟ್ ಹುದ್ದೆಗೆ ಏಪ್ರಿಲ್ 2 ಮತ್ತು 3ರಂದು ಮರು ಪರೀಕ್ಷೆ ನಡೆಯಲಿದೆ ಎಂದು ವಿಶ್ವವಿದ್ಯಾಲ ಯದ ಕುಲಪತಿ ಪ್ರೊ. ಬಿ.ಡಿ. ಕುಂಬಾರ ತಿಳಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮದಲ್ಲಿ ಇರಬೇಕು. ಆದರೆ ಈ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ. ಕನ್ನಡ ಭಾಷೆಗೆ ಸಂಬಂಧಿಸಿದ 5 ಪ್ರಶ್ನೆಗಳಷ್ಟೇ ಕನ್ನಡದಲ್ಲಿದ್ದು, ಉಳಿದವು ಇಂಗ್ಲಿಷ್‌ನಲ್ಲಿ ನೀಡಲಾಗಿತ್ತು ಎಂದು ಪರೀಕ್ಷಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.
‘ಕನ್ನಡ ಮಾಧ್ಯಮ ಮಾತ್ರವಲ್ಲ, ಕೆಲವು ತಾಂತ್ರಿಕ ತೊಂದರೆಗಳಿದ್ದವು. ಅದಕ್ಕಾಗಿ ಡೀನ್ ಕಮಿಟಿಯ ಸಭೆಯನ್ನು ಸೋಮವಾರ ಕರೆದು ಚರ್ಚೆ ನಡೆಸಿ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಯಿತು’ ಎಂದು ಪ್ರೊ. ಬಿ.ಡಿ. ಕುಂಬಾರ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.