ಮಕ್ಕಳ ಪ್ರತಿಭೆ ಗುರುತಿಸಿ: ನಂದಕಿಶೋರ್

ದಾವಣಗೆರೆ: ‘ಪ್ರತಿಯೊಬ್ಬ ಮಕ್ಕಳಲ್ಲೂ ಪ್ರತಿಭೆ ಅಡಗಿರುತ್ತದೆ. ಅದನ್ನು ಹೊರತರುವ ಕೆಲಸ ಮಾಡಬೇಕು’ ಎಂದು ಚಿತ್ರ ನಿರ್ದೇಶಕ ನಂದಕಿಶೋರ್ ಹೇಳಿದರು.
ಇಲ್ಲಿನ ಚೈತನ್ಯ ಹೈ-ಟೆಕ್ ಇನ್‌ಸ್ಟಿಟ್ಯೂಟ್ ಆಫ್ ಕಾಮರ್ಸ್ ಮ್ಯಾನೇಜ್‌ಮೆಂಟ್ ಅಂಡ್ ಸೈನ್ಸ್ ಕಾಲೇಜು ವತಿಯಿಂದ ನಗರದ ಗುಂಡಿಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ‘ಚೈತನ್ಯ ಘೂಮರ್-2ಕೆ22’ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ದಾವಣಗೆರೆ ನನಗೆ ಇದು ಅಚ್ಚುಮೆಚ್ಚು. ಇಲ್ಲಿನ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತೇನೆ. ಮಕ್ಕಳ ಪ್ರತಿಭೆ ಗುರುತಿಸಲು ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ಚಿತ್ರನಟ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಈ ಕಾರ್ಯಕ್ರಮ ಮಾಡಿರುವುದರಿಂದ ಜನರು ನೆನಪಿಸಿಕೊಳ್ಳುತ್ತಾರೆ’ ಎಂದು ಹೇಳಿದರು.
ರ‍್ಯಾಪರ್ ಚಂದನ್ ಶೆಟ್ಟಿ ಮಾತನಾಡಿ, ‘ಇಲ್ಲಿಯೇ ನನ್ನ ಕರಿಯರ್ ಆರಂಭಿಸಿರುವುದರಿಂದ ದಾವಣಗೆರೆ ನನಗೆ ಇಷ್ಟ. ಚೈತನ್ಯ ಕಾಲೇಜು ಕಲೆಗಳ ಮೂಲಕ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮೂಲಕ ಉತ್ತಮ ಕೆಲಸ ಮಾಡಿದೆ’ ಎಂದು ಹೇಳಿದರು.
ಪೊಗರು ಚಿತ್ರದ ಹಾಡಿಗೆ ನೃತ್ಯ ಮಾಡಿ ರಂಜಿಸಿದರು. ರಾಜ್ಯದ ಗದಗ್, ಬೀದರ್ ಹಾಗೂ ಕೋಲಾರ ಜಿಲ್ಲೆಗಳು ಸೇರಿ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸೊಲೊ ಹಾಗೂ ಸಮೂಹ ನೃತ್ಯಗಳು ನಡೆದವು. ಶಾಸಕ ಎಂ.ಪಿ.ರೇಣುಕಾಚಾರ್ಯ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.