ಉದ್ಯೋಗ ಖಾತ್ರಿಗೆ ₹448 ಕೋಟಿ ಅನುದಾನ ಬಿಡುಗಡೆ

7
ಗ್ರಾಮಸೌಧ ಕಟ್ಟಡವನ್ನು ಉದ್ಘಾಟಿಸಿದ ಸಂಸದ ಜಿ.ಎಂ. ಸಿದ್ದೇಶ್ವರ

ಉದ್ಯೋಗ ಖಾತ್ರಿಗೆ ₹448 ಕೋಟಿ ಅನುದಾನ ಬಿಡುಗಡೆ

Published:
Updated:
Deccan Herald

ಸಂತೇಬೆನ್ನೂರು: ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲೆಗೆ ₹448 ಕೋಟಿ ಅನುದಾನ ನೀಡಿದ್ದು, ಗ್ರಾಮಾಭಿವೃದ್ಧಿಗೆ ಹಣವನ್ನು ಸದ್ಬಳಕೆಗೆ ಶ್ರಮಿಸಿ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಲಹೆ ನೀಡಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಗ್ರಾಮಸೌಧ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರದ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಕಟ್ಟಡ ನಿರ್ಮಿಸಲಾಗಿದೆ. ಹಣದ ದುರುಪಯೋಗ, ಭ್ರಷ್ಟಾಚಾರಗಳನ್ನು ತಡೆಗಟ್ಟಿ, ಸರ್ಕಾರದ ಹಣ ಸಾರ್ವಜನಿಕರ ಹಣವಾಗಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿ ಎಂದು ಸಲಹೆ ನೀಡಿ ಎಂದರು.

ಕೇಂದ್ರ ಸರ್ಕಾರ ಈಗಾಗಲೇ ಮನೆ, ನಿವೇಶನಗಳನ್ನು ನೀಡಲು ಕ್ರಮ ಕೈಗೊಂಡಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಕರೆಯಲಾಗಿದೆ. 2020ರ ವೇಳೆಗೆ 6 ಕೋಟಿ ಮನೆ ನಿರ್ಮಿಸುವ ಗುರಿ ಇದ್ದು, ಈಗಾಗಲೇ 1 ಕೋಟಿ ಮನೆ ನಿರ್ಮಿಸಿ ಕೊಡಲಾಗಿದೆ. ಈ ಮೂಲಕ ಗುಡಿಸಲುಮುಕ್ತ ಭಾರತದ ಕನಸು ನನಸಾಗಲಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಗೊಳಿಸಿದೆ. ಆದರೆ  ರಾಜ್ಯ ಸರ್ಕಾರ ಫಸಲ್ ಭೀಮಾ ಯೋಜನೆಗೆ ತಾತ್ಸಾರ ತೋರುತ್ತಿದೆ’ ಎಂದು ಆರೋಪಿಸಿರು.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಾತನಾಡಿ, ‘ಸಂತೇಬೆನ್ನೂರು ಪಟ್ಟಣ ಪಂಚಾಯತಿ ಆಗಲಿದೆ. ಗ್ರಾಮಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರ ನಿಷ್ಕ್ರಿಯಗೊಂಡಿದೆ. ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಎಂದು ಟೀಕಿಸಿದರು.

 ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ಆರ್. ಜಯಶೀಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಜಿ. ದೇವೇಂದ್ರಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಪಿ. ವಾಗೀಶ್ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಆರ್. ಪ್ರಕಾಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೈ.ಎನ್. ವಿಜಯ ಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಾರದಮ್ಮ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸಿದ್ದೇಶ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಜೆ. ರಂಗನಾಥ್, ಲೋಹಿತ್ ಕುಮಾರ್, ಕೆ. ಬಸವರಾಜ್ ಇದ್ದರು.

 ಗೋಪಾಲ ಕೃಷ್ಣ ಸ್ವಾಗತಿಸಿದರು. ಮಾರುತಿ ಕಾರ್ಯಕ್ರಮ ನಿರೂಪಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !