ಶನಿವಾರ, ಜನವರಿ 28, 2023
15 °C

ಪಾಲಿಕೆ ಆಯುಕ್ತರಾಗಿ ರೇಣುಕಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ವಿಶ್ವನಾಥ್‌ ಪಿ. ಮುದಜ್ಜಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಆ ಸ್ಥಾನಕ್ಕೆ ಸ್ಥಳ ಪರಿವೀಕ್ಷಣೆಯಲ್ಲಿದ್ದ ರೇಣುಕಾ ಅವರನ್ನು ನಿಯೋಜಿಸಲಾಗಿದೆ.

ವಿಶ್ವನಾಥ್‌ ಪಿ. ಮುದಜ್ಜಿ ಅವರನ್ನು ನಗರಾಭಿವೃದ್ಧಿ ಇಲಾಖೆಯಡಿ ಬರುವ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರನ್ನಾಗಿ ಮಾಡಲಾಗಿದೆ. ರೇಣುಕಾ ಅವರನ್ನು ಮುಂದಿನ 2 ವರ್ಷಗಳಿಗೆ ಇಲ್ಲವೇ ಮುಂದಿನ ಆದೇಶದವರೆಗೆ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುವಂತೆ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.