ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಡು ಉಳಿದರೆ ನಾಡು ಉಳಿಯುವುದು: ರೇಣುಕ ಶಿವಾಚಾರ್ಯ ಸ್ವಾಮೀಜಿ

ಚನ್ನಗಿರಿಯ ತಾವರೆಕೆರೆ ಗ್ರಾಮದಲ್ಲಿ ಪರಿಸರ ದಿನಾಚರಣೆ
Published 5 ಜುಲೈ 2024, 14:25 IST
Last Updated 5 ಜುಲೈ 2024, 14:25 IST
ಅಕ್ಷರ ಗಾತ್ರ

ತಾವರೆಕೆರೆ (ಚನ್ನಗಿರಿ): ‘ಕಾಡನ್ನು ನಾಶಪಡಿಸಿದ ಪರಿಣಾಮ ಜನರು ಇಂದು ಬರಗಾಲ ಎದುರಿಸುವಂತಾಗಿದೆ. ಕಾಡು ಉಳಿದರೆ ಮಾತ್ರ ನಾಡು ಉಳಿಯಲು ಸಾಧ್ಯ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ’ ಎಂದು ಎಡೆಯೂರು ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ತಾಲ್ಲೂಕಿನ ತಾವರೆಕೆರೆ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ ಶಾಖೆಯ ಆವರಣದಲ್ಲಿ ಸೇವಾ ಭಾರತಿಯಿಂದ ಶುಕ್ರವಾರ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕಾಡು ನಾಶದಿಂದಕಾಡು ಪ್ರಾಣಿಗಳು ಆಹಾರ ಮತ್ತು ನೀರು ಅರಸಿ ನಾಡಿಗೆ ಬರುವಂತಾಗಿದೆ. ಕಾಲ ಕಾಲಕ್ಕೆ ಮಳೆಯಾಗದೇ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಕಾಲ ಕಾಲಕ್ಕೆ ಸರಿಯಾಗಿ ಮಳೆಯಾದರೇ ಮಾತ್ರ ರೈತರ ಜೀವನ ಉತ್ತಮವಾಗಿರುತ್ತದೆ. ಎಲ್ಲೆಡೆ ಸಸಿಗಳನ್ನು ನೆಟ್ಟು, ಪೋಷಿಸಿದರೆ ಮುಂದಿನ ದಿನಗಳಲ್ಲಿ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಹೇಳಿದರು.

ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಬ್ಯಾಂಕ್ ಶಾಖಾ ವ್ಯವಸ್ಥಾಪಕ ಗೌತಮ್ ಜೋಗಳೇಕರ್, ದೇವರಾಜ್, ಶ್ರೀಕಾಂತ್, ಎಂ.ಎಸ್. ಪ್ರಕಾಶ್, ನವೀನ್, ರಾಕೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT