ಮಂಗಳವಾರ, ಸೆಪ್ಟೆಂಬರ್ 17, 2019
27 °C

ರೇಣುಕಾಚಾರ್ಯ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ

Published:
Updated:
Prajavani

ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿರುವುದರಿಂದ ರೇಣುಕಾಚಾರ್ಯಗೆ ಸಂಪುಟ ದರ್ಜೆಯ ಸಚಿವರಿಗೆ ಇರುವ ಎಲ್ಲ ಸೌಲಭ್ಯಗಳು ಸಿಗಲಿವೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರೇಣುಕಾಚಾರ್ಯ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ರೇಣುಕಾಚಾರ್ಯ ಸೇರಿ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಲವರಿಗೆ ಸಚಿವ ಸ್ಥಾನ ನೀಡದೆ ಬಿಜೆಪಿ ಹೈಕಮಾಂಡ್‌ ಶಾಕ್‌ ನೀಡಿತ್ತು.

ಸಚಿವ ಸ್ಥಾನ ಸಿಗದ ಕಾರಣ ಅವರು ಅಸಮಾಧಾನಗೊಂಡಿದ್ದರು. ಆದರೆ ಎಲ್ಲಿಯೂ ಬಹಿರಂಗವಾಗಿ ಅಸಮಾಧಾನ ತೋರ್ಪಡಿಸಿರಲಿಲ್ಲ. ಈ ಬಗ್ಗೆ ಹಲವು ಬಾರಿ ಬೆಂಗಳೂರಿನಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವ ಮೂಲಕ ಯಡಿಯೂರಪ್ಪ ಸಮಾಧಾನಪಡಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

Post Comments (+)