ಹೊನ್ನಾಳಿ: ಕಾಂಗ್ರೆಸ್ ಸರ್ಕಾರ ರಚನೆಯಾಗಿ ಎರಡು ತಿಂಗಳಾಗಿದ್ದು, ಇಷ್ಟು ಕಡಿಮೆ ಅವಧಿಯಲ್ಲಿಯೇ ತನ್ನ ಬಂಡವಾಳ ಬಯಲು ಮಾಡಿಕೊಂಡಿದೆ. ಸರ್ಕಾರದ ಹಾಲಿ ಸಚಿವರ ವಿರುದ್ಧ ಸ್ವಪಕ್ಷೀಯ ಶಾಸಕರೇ ಅಸಮಾಧಾನ ಹೊರಹಾಕಿರುವುದು ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಪುರಾವೆ ಸಿಕ್ಕಿದೆಯಾಗಿದೆ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಟೀಕಿಸಿದರು.
ಶಾಸಕರಿಗೆ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ವರ್ಗಾವಣೆ ಶಿಫಾರಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಆರೋಪಿಸಿದ್ದಾರೆ ಎಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಕೆ. ಸುರೇಶ್, ಜಿಲ್ಲಾ ಉಪಾಧ್ಯಕ್ಷ ನೆಲಹೊನ್ನೆ ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ಧನಂಜಯ, ಮುಖಂಡರಾದ ಶಾಂತರಾಜ್, ಉದಯ್, ಕಾಂತರಾಜ್, ಹಾಲೇಶ್, ಶರತ್ ಇದ್ದರು.