ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಎಸ್‌ವೈ ವಿರುದ್ಧ ಮಾತನಾಡಿದರೆ ಸುಮ್ಮನಿರಲ್ಲ: ಸೋಮಣ್ಣಗೆ ರೇಣುಕಾಚಾರ್ಯ ಎಚ್ಚರಿಕೆ

Published : 26 ನವೆಂಬರ್ 2023, 16:36 IST
Last Updated : 26 ನವೆಂಬರ್ 2023, 16:36 IST
ಫಾಲೋ ಮಾಡಿ
Comments

ದಾವಣಗೆರೆ: ‘ಕಾಂಗ್ರೆಸ್‌ನಿಂದ ಬಂದು ಬಿಜೆಪಿಯಲ್ಲಿ ನಿರಂತರ ಅಧಿಕಾರ ಅನುಭವಿಸಿ ಈಗ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವುದು ಸರಿಯಲ್ಲ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಮಾಜಿ ಸಚಿವ ವಿ. ಸೋಮಣ್ಣ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ನಿಮ್ಮಿಂದ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ., ಬದಲಾಗಿ ಕಾಂಗ್ರೆಸ್‌ನಿಂದ ಬಂದು ಸೋತರೂ ವಿಧಾನಪರಿಷತ್ ಸದಸ್ಯರಾಗಿದ್ದೀರಿ. ನಿಮ್ಮನ್ನು ಸಚಿವರನ್ನಾಗಿ ಮಾಡಿದ್ದೇ. ಬಿ.ಎಸ್. ಯಡಿಯೂರಪ್ಪ’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

‘ವಿ.ಸೋಮಣ್ಣ ಅವರು ಸಿದ್ಧಗಂಗಾ ಮಠದಲ್ಲಿ ರಾಜಕಾರಣ ಮಾಡಿದ್ದಾರೆ. ದೆಹಲಿಗೆ ಹೋಗುತ್ತಾರಾ ಹೋಗಲಿ, ಅದೇನು ಚಾಡಿ ಹೇಳುತ್ತಾರೋ ಹೇಳಲಿ. ನಮಗೂ ದೆಹಲಿ ನಾಯಕರು ಗೊತ್ತು, ನಾವೂ ದೆಹಲಿಗೆ ಹೋಗುತ್ತೇವೆ. ಯಡಿಯೂರಪ್ಪ ಅವರ ಬಗ್ಗೆ ವಿನಾಕಾರಣ ಮಾತನಾಡಿದರೆ ನಾನು ಸುಮ್ಮನೇ ಇರುವುದಿಲ್ಲ’ ಎಂದು ಎಚ್ಚರಿಸಿದರು.

‘ವಿಧಾನಸಭೆ ಸೋಲಿನ ಹಿನ್ನೆಲೆಯಲ್ಲಿ ವರಿಷ್ಠರು ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದೆ ಬಿ.ಎಸ್. ಯಡಿಯೂರಪ್ಪ, ಅವರು ರೆಡಿಮೇಡ್ ಫುಡ್ ಅಲ್ಲ’ ಎಂದು ಹೇಳಿದರು. 

‘ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ಗಾಜಿನ ಮನೆಯಲ್ಲಿ ಕುಳಿತು ಜಾತಿಗಣತಿ ವರದಿ ಸಿದ್ಧಪಡಿಸಲಾಗಿದೆ. ಇನ್ನೂ ಆರು ತಿಂಗಳು ಸಮಯವಾದರೂ ಪರ್ವಾಗಿಲ್ಲ. ಮನೆಮನೆಗೆ ಹೋಗಿ ವರದಿ ತಯಾರಿಸಿ’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT