ಸೋಮವಾರ, ಜೂನ್ 14, 2021
26 °C

ರದ್ದಾಗಿರುವ ಬಿಪಿಎಲ್ ಕಾರ್ಡ್‍ಗಳಿಗೂ ರೇಷನ್ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ನಗರದಲ್ಲಿ 2-3 ತಿಂಗಳುಗಳಲ್ಲಿ ನಾನಾ ಕಾರಣಗಳಿಗೆ 5-6 ಸಾವಿರ ಬಿಪಿಎಲ್ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ ಬಡವರೇ ಹೆಚ್ಚಿದ್ದಾರೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಮಾನವೀಯ ದೃಷ್ಟಿಯಿಂದ ರದ್ದಾದ ಬಿಪಿಎಲ್ ಕಾರ್ಡ್‍ಗಳಿಗೂ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಒದಗಿಸಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಅವರು ಆಗ್ರಹಿಸಿದ್ದಾರೆ.

ಆದಾಯ ತೆರಿಗೆ ಕಚೇರಿಯ ವರದಿಯಂತೆ ಬಿಪಿಎಲ್ ಕಾರ್ಡ್‍ಗಳು ರದ್ದಾಗಿವೆ. ಕೆಲವರು ಮನೆ ನಿರ್ಮಾಣಕ್ಕಾಗಿ ಬ್ಯಾಂಕ್ ಸಾಲ ತೆಗೆದುಕೊಳ್ಳಲು ಐಟಿ ರಿಟರ್ನ್ಸ್‌ ಪಡೆದಿದ್ದಾರೆ. ವಿನಃ ಅವರು ಐಟಿ ಕಟ್ಟುವಷ್ಟು ಶ್ರೀಮಂತರಲ್ಲ. ₹ 2 ಲಕ್ಷವರೆಗೆ ಎಕ್ಸಂಪ್ಶನ್‌ ತೋರಿಸಿದ್ದಕ್ಕಾಗಿ ರದ್ದಾಗಿದೆ ಎಂದು ತಿಳಿಸಿದ್ದಾರೆ.

ಕೂಲಿ ಕಾರ್ಮಿಕರಾಗಿರುವವರು ನ್ಯಾಯಬೆಲೆ ಅಂಗಡಿಗಳಲ್ಲಿ ನೀಡುವ ಅಕ್ಕಿಯನ್ನು ಊಟ ಮಾಡುವವರಾಗಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ರದ್ದಾದ ಕಾರ್ಡ್‍ಗಳಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಒದಗಿಸಬೇಕು ಎಂದು ನಾಗರಾಜ್‌ ಹೇಳಿಕೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.