ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ.ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

Last Updated 21 ಸೆಪ್ಟೆಂಬರ್ 2020, 16:27 IST
ಅಕ್ಷರ ಗಾತ್ರ

ದಾವಣಗೆರೆ: ವಿಧಾನಸಭೆ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯ ಮಂಡಿಸಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿದರು.

ಸಮಿತಿ ರಾಜ್ಯ ಸಂಚಾಲಕ ಎಂ .ಗುರುಮೂರ್ತಿ ಮಾತನಾಡಿ, ‘ಹಿಂದುಳಿದ ಜಾತಿಗಳಿಗೆ ಮೀಸಲಾತಿ ಮತ್ತು ಒಳಮೀಸಲಾತಿಯನ್ನು ಕಲ್ಪಿಸಿ ಕಾಯ್ದೆ ರಚಿಸಿವುದು ಸಂವಿಧಾನ ಬದ್ದವಾಗಿದೆ ಎಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಆದೇಶಿಸಿದೆ. ಅಲ್ಲದೇ ಪ.ಜಾತಿ ಮತ್ತು ಪ.ಪಂಗಡಗಳಿಗೆ ಒಳಮೀಸಲಾತಿ ಕಲ್ಪಿಸುವ ಅವಕಾಶವಿದೆ. ಕಾಯ್ದೆ ಜಾರಿಗೊಳಿಸುವ ಅಧಿಕಾರವು ರಾಜ್ಯಗಳಿಗೆ ಇದೆ ಎಂದೂ ಹೇಳಿದೆ’ ಎಂದರು.

ದೇಶದಲ್ಲಿ ಸುಮಾರು 1,500 ಪಜಾತಿಗಳು ಹಾಗೂ 1,000 ಪರಿಶಿಷ್ಟಪಂಗಡಗಳು ಮೀಸಲಾತಿಯನ್ನು 7 ದಶಕಗಳಿಂದ ಪಡೆಯುತ್ತಿವೆ. ರಾಜ್ಯದಲ್ಲಿ ಪರಿಶಿಷ್ಟರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನ್ಯಾಯಯುತವಾಗಿ ವಿತರಣೆಯಾಗಿಲ್ಲ. ರಾಜ್ಯ ಸರ್ಕಾರ ಪರಿಶಿಷ್ಟರಲ್ಲಿ ಉಂಟಾಗಿರುವ ತಾರತಮ್ಯ ನಿವಾರಿಸಿ. ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ, ಬುಳ್ಳಾಸಾಗರದ ಸಿದ್ದರಾಮಣ್ಣ, ಜಿಗಳಿ ಹಾಲೇಶ್‌, ನಿಟ್ಟುವಳ್ಳಿ ನಾಗರಾಜ್, ಚಿತ್ರಲಿಂಗಪ್ಪ, ಗೋಪನಾಳ್ ಚಂದ್ರು, ಹನುಮಂತಪ್ಪ, ಪ್ರದೀಪ್, ಎ.ಕೆ.ತಿಪ್ಪೇಶ ತಿಮ್ಮನಹಳ್ಳಿ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT