ಚನ್ನಗಿರಿ: ಪಟ್ಟಣದ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಗುರುವಾರ ವಿದ್ಯಾರ್ಥಿಗಳು ಪ್ರಾಂಶುಪಾಲ ಬಸವನಗೌಡ ಅವರಿಗೆ ಮನವಿ ಸಲ್ಲಿಸಿದರು.
‘ಉಡುಪಿಯ ನೇತ್ರಾಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಈಚೆಗೆ ಕೆಲವು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಇತರೆ ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಮಾಡಿ ಬೇರೆಯವರಿಗೆ ಕಳುಹಿಸಿರುವ ಘಟನೆ ನಡೆದಿದ್ದು, ನಮ್ಮ ಕಾಲೇಜಿನಲ್ಲಿಯೂ ಇಂತಹ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕಾಗಿ ವಿದ್ಯಾರ್ಥಿಗಳು ಕಾಲೇಜಿನ ಒಳಗಡೆ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಬೇಕು. ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆಯನ್ನು ವಿದ್ಯಾರ್ಥಿಗಳಿಗೆ ನೀಡಬೇಕು’ ಎಂದು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.
ಈ ಸಂದರ್ಭದಲ್ಲಿ ನಿತೀನ್, ಸಾಗರ್, ಸಂಜಯ್, ಹೇಮಂತ್ ಉಪಸ್ಥಿತರಿದ್ದು, ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.