ದಾವಣಗೆರೆ: ‘ದ್ವೇಷ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಪ್ರಿಲ್ 28ರಂದು ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು’ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

ದ್ವೇಷ ಭಾಷಣದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಬಿಜೆಪಿ ಅಧ್ಯಕ್ಷರಿಗೆ ನೋಟಿಸ್ ನೀಡಿದ್ದು, ಪ್ರಧಾನಿ ಮೋದಿ ಅವರಿಗೆ ದಾವಣಗೆರೆ ಪ್ರವೇಶಿಸದಂತೆ ಆದೇಶ ಹೊರಡಿಸಬೇಕು ಎಂದೂ ಅವರು ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.

ರಾಜಸ್ತಾನದ ಜೈಪುರ ಹಾಗೂ ಉತ್ತರ ಪ್ರದೇಶದ ಅಲೀಗಢದಲ್ಲಿ ನಡೆದ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ಮೋದಿ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಸುಳ್ಳು ಹೇಳಿದ್ದಾರೆ. ಕೋಮುಭಾವನೆ ಕೆರಳಿಸುವಂತೆ ಮಾತನಾಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿಯ ಹೇಳಿಕೆ ನೀಡಿದರೆ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಒಂದು ವೇಳೆ ಮೋದಿ ಭಾಗವಹಿಸಲು ಅವಕಾಶ ನೀಡಿದರೆ, ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.