ಭಾನುವಾರ, ಜೂಲೈ 5, 2020
28 °C

ದಾವಣಗೆರೆ: ₹1.19 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಬಡವರಿಗೆ ತಲುಪಬೇಕಾಗಿದ್ದ 8 ಟನ್ ಪಡಿತರ ಅಕ್ಕಿ ಹಾಗೂ ಮಾರಾಟ ಮಾಡಲು ಸಾಗಿಸುತ್ತಿದ್ದ ಲಾರಿಯನ್ನು ಗ್ರಾಮಾಂತರ ಡಿವೈಎಸ್ಪಿ ವಿ.ನರಸಿಂಹ ತಾಮ್ರಧ್ವಜ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ತಂಡ ವಶಕ್ಕೆ ಪಡೆದು ಲಾರಿ ಚಾಲಕ ಜಗದೀಶ್‌ನನ್ನು ಬಂಧಿಸಿದೆ.

ತಾಲೂಕಿನ ಹೆಬ್ಬಾಳು ಟೋಲ್‌ ಬಳಿಯ ಹುಣಸೆಕಟ್ಟೆ ಸಮೀಪ ಮಜ್ದಾ ಲಾರಿಯಲ್ಲಿ 1.19 ಲಕ್ಷ ಮೌಲ್ಯದ ಅಕ್ಕಿಯನ್ನು ಲಾರಿಯಲ್ಲಿ ತುಮಕೂರು ಹಾಗೂ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು