ಲಾರಿಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

7

ಲಾರಿಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Published:
Updated:

ದಾವಣಗೆರೆ: ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 13ರ ಬಂಗಾರಕ್ಕನ ಗುಡ್ಡ ಬಳಿ ಶುಕ್ರವಾರ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ.

ಹೊಸಪೇಟೆಯಿಂದ ಬರುತ್ತಿದ್ದ ರಾಜಸ್ಥಾನದ ಲಾರಿ ಹಾಗೂ ಚಿತ್ರದುರ್ಗದ ಕಡೆಯಿಂದ ಹೋಗುತ್ತಿದ್ದ ಮಹಾರಾಷ್ಟ್ರ ಲಾರಿಗಳೆರಡು ಮುಖಾಮುಖಿ ಡಿಕ್ಕಿಯಾಗಿ ಅಪಘಾತಕ್ಕೀಡಾಗಿವೆ.

ಲಾರಿಯಲ್ಲಿ ಸಿಲುಕಿಕೊಂಡಿದ್ದ ರಾಜಸ್ಥಾನದ ಚಾಲಕ ಕರಣ್ ಸಿಂಗ್ ಅವರನ್ನು ಹೊರತೆಗೆಯಲು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳಿಂದ ಹರ ಸಾಹಸ ಪಡುವಂತಾಯಿತು.

ಗಾಯಗೊಂಡಿದ್ದ ಕರಣ್ ಸಿಂಗ್, ಭಕ್ತರ್ ಸಿಂಗ್ ಅವರನ್ನು ಜಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಮೂವರು ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ರಾಜಸ್ಥಾನದ ಲಾರಿ ಮತ್ತೊಂದು ವಾಹನವನ್ನು ಹಿಂದಿಕ್ಕುವಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !