ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸುರಹೊನ್ನೆ | ಟ್ರ್ಯಾಕ್ಟರ್ ಡಿಕ್ಕಿ: ಪಾದಚಾರಿ ಸಾವು

Published 1 ಜುಲೈ 2024, 16:13 IST
Last Updated 1 ಜುಲೈ 2024, 16:13 IST
ಅಕ್ಷರ ಗಾತ್ರ

ಸುರಹೊನ್ನೆ (ನ್ಯಾಮತಿ): ಗ್ರಾಮದ ಹೊನ್ನಾಳಿ-ಶಿವಮೊಗ್ಗ ಮುಖ್ಯರಸ್ತೆಯ ಹೊಯ್ಸಳ ಡಾಬಾದ ಬಳಿ ಸೋಮವಾರ ಮಧ್ಯಾಹ್ನ ಪಾದಚಾರಿಗೆ ಟ್ರ್ಯಾಕ್ಟರ್ ಎಂಜಿನ್ ಡಿಕ್ಕಿ ಹೊಡೆದ ಪರಿಣಾಮ ಗೋವಿನಕೋವಿ ಗ್ರಾಮದ ಬಸವರಾಜಪ್ಪ(60) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬಸವರಾಜಪ್ಪ ಅವರು ಸುರಹೊನ್ನೆ ಗ್ರಾಮದಲ್ಲಿರುವ ತಮ್ಮ ಮಗಳ ಮನೆಗೆ ಐದು ದಿನಗಳ ಹಿಂದೆ ಬಂದಿದ್ದರು. ಜಮೀನು ನೋಡಿಕೊಂಡು ಬರಲು ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ.

ಚಾಲಕ ನಿರ್ಲಕ್ಷ್ಯದಿಂದ ಡಿಕ್ಕಿ ಹೊಡೆದ ಪರಿಣಾಮ ತಂದೆಯವರ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪುತ್ರಿ ನ್ಯಾಮತಿ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ನ್ಯಾಮತಿ ಠಾಣೆ ಇನ್‌ಸ್ಪೆಕ್ಟರ್ ಎನ್.ಎಸ್.ರವಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT