ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC | 625 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ₹1 ಲಕ್ಷ ಬಹುಮಾನ: ಶಾಸಕ ಬಸವರಾಜು

Published 3 ಮಾರ್ಚ್ 2024, 14:22 IST
Last Updated 3 ಮಾರ್ಚ್ 2024, 14:22 IST
ಅಕ್ಷರ ಗಾತ್ರ

ಸಂತೇಬೆನ್ನೂರು: ‘ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ತಲಾ ₹1 ಲಕ್ಷ ಬಹುಮಾನ ನೀಡುತ್ತೇನೆ. ಶೇ 95ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹೆಸರಾಂತ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಕೊಡಿಸುವ ಮೂಲಕ ಶಿಕ್ಷಣಕ್ಕೆ ನೆರವಾಗುತ್ತೇನೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.

ಸಮೀಪದ ಕೆರೆಬಿಳಚಿ ಗ್ರಾಮಾಂತರ ಪ್ರೌಢಶಾಲೆ ಹಾಗೂ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಶನಿವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ರಾತ್ರಿ ಪಾಳೆಯದ ತರಗತಿಗಳನ್ನು ವೀಕ್ಷಿಸಿ ಅವರು ಮಾತನಾಡಿದರು.

‘ರಾತ್ರಿ ತರಗತಿ ನಡೆಸುವುದರಿಂದ ವಿದ್ಯಾರ್ಥಿಗಳು ಟಿವಿ, ಮೊಬೈಲ್‌ಗಳಿಂದ ದೂರ ಉಳಿಯುತ್ತಾರೆ. ಪರಸ್ಪರ ಸಂಹವನದ ಕಲಿಕೆ, ಸ್ಮರಣೆ ವೃದ್ಧಿಸುತ್ತದೆ. ಸರ್ಕಾರಿ ಶಾಲೆಯಲ್ಲಿ ರೋಬಾಟಿಕ್ ತಂತ್ರಜ್ಞಾನದ ಪ್ರೊಟೋಟೈಪ್ ಕುತೂಹಲ ಮೂಡಿಸಿದೆ. ಭವಿಷ್ಯದಲ್ಲಿ ದೇಶದ ಅಭಿವೃದ್ಧಿಗೆ ವೈಜ್ಞಾನಿಕ ಸಂಶೋಧಕರಾಗಲು ವೇದಿಕೆ ನೀಡಿರುವುದು ಸಾಧನೆ. ಹಳೆಯ ವಿದ್ಯಾರ್ಥಿಗಳು ನಮ್ಮೂರ ಶಾಲೆ ಅಭಿಮಾನದಿಂದ ಬಲ ನೀಡಿರುವುದು ಅನುಕರಣೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಡಿಡಿಪಿಐ ಕೊಟ್ರೇಶ್, ಬಿಇಒ ಎಲ್. ಜಯಪ್ಪ, ಪ್ರೌಢಶಾಲೆಗಳ ಶಿಕ್ಷಕರು, ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT