ಮಂಗಳವಾರ, ಏಪ್ರಿಲ್ 7, 2020
19 °C

ಮಹಿಳೆ ಜತೆ ಅಸಭ್ಯ ವರ್ತನೆ: ಗ್ರಾ.ಪಂ.ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ತಾಲ್ಲೂಕಿನ ಹೊನ್ನೂರು ಗ್ರಾಮ ಪಂಚಾಯ್ತಿ ಕಾರ್ಯಾಲಯದ ಅಟೆಂಡರ್ ಜತೆಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದ ಕಂಪ್ಯೂಟರ್ ಆಪರೇಟರ್ ಮೇಲೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಂಕಟೇಶ್ ಎಂಬುವವನು ಕಿರುಕುಳ ನೀಡಿದ ಆರೋಪಿ ಎಂದು ತಿಳಿದುಬಂದಿದೆ. 

ಮಹಿಳೆ ಥಂಬ್ ನೀಡಲು ಬರುವಾಗೆಲ್ಲ ಮೈ ಕೈ ಹಿಡಿದು ಅಸಭ್ಯವಾಗಿ ವರ್ತಿಸುವ, ಮಹಿಳೆ ಪ್ರತಿರೋಧ ತೋರುವ ದೃಶ್ಯಗಳು ಕಚೇರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಕಳೆದ ನವೆಂಬರ್ ಮತ್ತು ಫೆಬ್ರುವರಿಯ ನಾಲ್ಕು ವಿಡಿಯೊ ಫೂಟೇಜ್ ನೀಡಿ ಮಹಿಳೆ ದೂರು ನೀಡಿದ್ದಾರೆ. ಆರೋಪಿ ವೆಂಕಟೇಶ್ ತಪ್ಪಿಸಿಕೊಂಡಿದ್ದಾನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು