ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರ ಸ್ವೀಕರಿಸಿದ ದಿನವೇ ನಿವೃತ್ತಿ

ಒಂದು ದಿನಕ್ಕಾಗಿ ಎಸಿಬಿ ಎಸ್ಪಿಯಾದ ಸಂದಿಗವಾಡ
Last Updated 31 ಜುಲೈ 2020, 13:46 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಭ್ರಷ್ಟಾಚಾರ ನಿಗ್ರಹ ದಳದ (ಎ.ಸಿ.ಬಿ) ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಎಸ್‌.ಎಂ. ಸಂದಿಗವಾಡ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ ದಿನವೇ ನಿವೃತ್ತಿಯಾಗುವ ಮೂಲಕ ಗಮನ ಸೆಳೆದಿದ್ದಾರೆ.

ದಾವಣಗೆರೆ ಜಿಲ್ಲೆಯ ಎಸಿಬಿ ಎಸ್ಪಿ ಹುದ್ದೆ ಹಲವು ದಿನಗಳಿಂದ ಖಾಲಿ ಇತ್ತು. ಡಿಎಸ್‌ಪಿ ಎಚ್‌.ಎಸ್‌. ಪರಮೇಶ್ವರ ಅವರೇ ಪ್ರಭಾರ ಎಸ್ಪಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷರೇಟ್‌ನಲ್ಲಿ ಸಂಚಾರ ವಿಭಾಗದ ಎಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದಿಗವಾಡ ಅವರು ಪದೋನ್ನತಿ ಪಡೆದು, ಎಸಿಬಿ ಎಸ್ಪಿ ಹುದ್ದೆಗೆ ವರ್ಗಾವಣೆಗೊಂಡಿದ್ದರು.

ಶುಕ್ರವಾರ ಬೆಳಿಗ್ಗೆ ಕಚೇರಿಗೆ ಬಂದ ಅವರು ಅಧಿಕಾರ ಸ್ವೀಕರಿಸಿದರು. ಸಂಜೆಯ ವೇಳೆಗೆ ನಿವೃತ್ತಿಯ ಪ್ರಕ್ರಿಯೆಯನ್ನು ಪೂರೈಸುವ ಮೂಲಕ ಒಂದು ದಿನ ಎಸ್ಪಿಯಾಗಿ ಕಾರ್ಯನಿರ್ವಹಣೆ ಮಾಡಿದರು. ಡಿಎಸ್‌ಪಿ ಪರಮೇಶ್ವರ ಅವರೇ ಮತ್ತೆ ಪ್ರಭಾರ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡರು.

ಈ ಬಗ್ಗೆ ಸಂದಿಗವಾಡ ಅವರ ಪ್ರತಿಕ್ರಿಯೆ ಪಡೆಯಲು ಯತ್ನಿಸಿದರೂ ಲಭ್ಯವಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT